ಶಿವಮೊಗ್ಗ

1000 ಕೆಪಿಎಸ್ ಶಾಲೆಗಳ ಚಾಲನಾ ಕಾರ್ಯಕ್ರಮಕ್ಕೆ ಕರಿನೆರಳು

ಶಿವಮೊಗ್ಗ ; ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಪರಿಣಾಮವಾಗಿ ಜೂನ್ 1ರಂದು ನಗರದಲ್ಲಿ ನಿಗದಿಯಾಗಿದ್ದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ 1000 ಕೆಪಿಎಸ್ ಶಾಲೆಗಳಿಗೆ ಚಾಲನೆ ನೀಡಲು ರೂಪುಗೊಂಡ ಕಾರ್ಯಕ್ರಮಕ್ಕೆ ಕರಿನೆರಳು ಬಿದ್ದಿದೆ.

WhatsApp Group Join Now
Telegram Group Join Now
Instagram Group Join Now

ಅಲ್ಲಮಪ್ರಭು ಮೈದಾನದಲ್ಲಿ ಭರದಿಂದ ಸಾಗುತ್ತಿದ್ದ ಕಾರ್ಯಕ್ರಮದ ಸಿದ್ಧತಾ ಕಾರ್ಯವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬುಧವಾರ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಶಿವಮೊಗ್ಗ ಮತ್ತು ತೀರ್ಥಹಳ್ಳಿಯಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಸಭೆಯನ್ನು ರದ್ದುಪಡಿಸಿ, ತೀವ್ರ ಚರ್ಚೆಯ ನಂತರ ದಿಢೀರ್ ಬೆಂಗಳೂರಿಗೆ ತೆರಳಿದ್ದಾರೆ.

ಯುವನಿಧಿ ಯೋಜನೆಗೆ ಚಾಲನೆ ನೀಡಿದ ಬಳಿಕ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಶಿವಮೊಗ್ಗದಲ್ಲಿ ಆಯೋಜಿಸಲಾಗಿದ್ದ ಈ ಬೃಹತ್ ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ಪೂರ್ಣ ಸಿದ್ಧತೆ ನಡೆಸಿತ್ತು. ಜರ್ಮನ್ ಟೆಂಟ್ ಒಳಗೊಂಡ ಸಭಾಂಗಣ ನಿರ್ಮಿಸಲಾಗಿದ್ದು, ಮಳೆಯಿಂದ ರಕ್ಷಿಸುವ ವ್ಯವಸ್ಥೆ ಮತ್ತು ವೇದಿಕೆಯ ಮುಂಭಾಗ ಕುರ್ಚಿಗಳ ಜೋಡಣೆ ಕಾರ್ಯವೂ ನಡೆಯುತ್ತಿತ್ತು. ಬೃಹತ್ ಕ್ರೇನ್‌ಗಳ ಸಹಾಯದಿಂದ ನಿನ್ನೆ ಬೆಳಿಗ್ಗೆಯಿಂದ ಸಿದ್ಧತೆ ನಡೆಯುತ್ತಿದ್ದು, ಈಗ ಆ ಕಾರ್ಯಗಳು ಸ್ಥಗಿತಗೊಂಡಿರುವುದು ಗಮನಾರ್ಹ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]