ಜೂ. 4ಕ್ಕೆ ಇತಿಹಾಸ ಪ್ರಸಿದ್ಧ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಿಯ ನೂತನ ಶಿಲಾಮಯ ದೇವಸ್ಥಾನ ಲೋಕಾರ್ಪಣೆ

Written by Mahesh Hindlemane

Published on:

ರಿಪ್ಪನ್‌ಪೇಟೆ ; ಇತಿಹಾಸ ಪ್ರಸಿದ್ದ ಶ್ರೀ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಸ್ಥಾನ ಸುಮಾರು 5 ಕೋಟಿ ರೂ. ವೆಚ್ಚದ ನೂತನ ಶಿಲಾಮಯ ದೇವಸ್ಥಾನ ಕಟ್ಟಡ ಜೂನ್ 4 ರಂದು ಬೆಳಗ್ಗೆ 10 ಗಂಟೆಗೆ ಲೋಕಾರ್ಪಣೆಗೊಳ್ಳಲಿದೆ ಎಂದು ಅಮ್ಮನಘಟ್ಟ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ.ಸ್ವಾಮಿರಾವ್ ತಿಳಿಸಿದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಅಮ್ಮನಘಟ್ಟದ ದೇವಸ್ಥಾನದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಶಿಲಾಮಯ ದೇವಸ್ಥಾನ ಲೋಕಾರ್ಪಣೆ ಮತ್ತು ಧರ್ಮಸಭೆಯ ದಿವ್ಯಸಾನಿಧ್ಯವನ್ನು ಆನಂದಪುರ ಮುರುಘಾಮಠದ ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಮಹಾಸ್ವಾಮೀಜಿ ವಹಿಸಿ ಆಶಿರ್ವಚನ ನೀಡುವರು.

ಮಹಾದ್ವಾರವನ್ನು ಹಾವೇರಿ ಜಿಲ್ಲೆ ನಿಜಶರಣ ಅಂಬಿಗರ ಚೌಡಯ್ಯನವರ ಗುರುಪೀಠ ಪೀಠಾಧ್ಯಕ್ಷ ಜಗದ್ಗುರು ಶ್ರೀಶಾಂತಭೀಷ್ಮ ಚೌಡಯ್ಯ ಮಹಾಸ್ವಾಮಿಗಳು ನೆರವೇರಿಸುವರು.

ನಿಟ್ಟೂರು ನಾರಾಯಣಗುರು ಮಹಾಸಂಸ್ಥಾನ ಪೀಠಾಧ್ಯಕ್ಷರಾದ ರೇಣುಕಾನಂದ ಸ್ವಾಮೀಜಿ ಮತ್ತು ಶಿವಯೋಗಾಶ್ರಮ ಮೂಲೆಗದ್ದೆ ಮಠ ಅಭಿನವ ಚನ್ನಬಸವ ಮಹಾಸ್ವಾಮೀಜಿ ಸಮ್ಮುಖವಹಿಸುವರು.

ದೇವಸ್ಥಾನಕ್ಕೆ 108 ಸುಸಜ್ಜಿತ ಶಾಶ್ವತ ಮೆಟ್ಟಿಲುಗಳ ನಿರ್ಮಾಣಕ್ಕೆ ಸಂಸದ ಬಿ.ವೈ.ರಾಘವೇಂದ್ರ ಶಿಲಾನ್ಯಾಸ ನೆರವೇರಿಸುವರು.

ಮಾಜಿ ಶಾಸಕ ಹಾಗೂ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ. ಸ್ವಾಮಿರಾವ್ ಸಮಾರಂಭದ ಅಧ್ಯಕ್ಷತೆ ವಹಿಸುವರು.

ಮುಖ್ಯಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಮತ್ತು ರಾಜ್ಯ ಪ್ರಾಥಮಿಕ ಪ್ರೌಢಶಿಕ್ಷಣ ಸಚಿವರಾದ ಮಧು ಬಂಗಾರಪ್ಪ, ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾಭಿವೃದ್ದಿ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ, ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ, ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ, ವಿಧಾನಪರಿಷತ್ ಸದಸ್ಯರಾದ ಎಸ್.ಎಲ್.ಭೋಜೆಗೌಡ, ಎಸ್.ಭಾರತಿ ಶೆಟ್ಟಿ, ಡಿ.ಎಸ್.ಅರುಣ್, ಡಾ.ಧನಂಜಯ ಸರ್ಜಿ, ಬಲ್ಕೀಶ್‌ಭಾನು, ಮತ್ತು ಕೋಡೂರು ಗ್ರಾಮ ಪಂಚಾಯ್ತಿ ಜಯಪ್ರಕಾಶ, ಮಾರುತಿಪುರ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಜಯಮ್ಮ ಮತ್ತು ಮುಂಬಾರು ಗ್ರಾಮ ಪಂಚಾಯ್ತಿ ಅಧ್ಯಕ್ಷ ಎನ್.ಕುಮಾರ್ ಜಿಲ್ಲೆಯ ತಾಲ್ಲೂಕಿನ ಇನ್ನಿತರ ರಾಜಕೀಯ ಮುಖಂಡರು ಪಾಲ್ಗೊಳುವರು ಎಂದು ಅಮ್ಮನಘಟ್ಟ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ.ಸ್ವಾಮಿರಾವ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಕಾರ್ಯದರ್ಶಿ ಸುಧೀರ್‌ಭಟ್, ಕಟ್ಟಡ ಅಭಿವೃದ್ಧಿ ಸಮಿತಿಯ ಕಾರ್ಯದರ್ಶಿ ಕೋಡೂರು ವಿಜೇಂದ್ರರಾವ್, ಕೋಡೂರು ಗ್ರಾಮ ಪಂಚಾಯ್ತಿ ಅಧ್ಯಕ್ಷ ಕೋಡೂರು ಜಯಪ್ರಕಾಶ್, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಪುಟ್ಟಪ್ಪ, ದೇವರಾಜ, ಹರೀಶ್ ಗೌಡ, ಶ್ರೀನಿವಾಸ ಹಿಂಡ್ಲೆಮನೆ, ರತ್ನಮ್ಮ, ದೇವಸ್ಥಾನದ ಪ್ರಧಾನ ಅರ್ಚಕ ಭಾಸ್ಕರ್‌ಜೋಯ್ಸ್, ಇದ್ದರು.

Leave a Comment