ನರ್ಸಿಂಗ್ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ – ಅರ್ಜಿ ಆಹ್ವಾನ!

Written by Koushik G K

Published on:

ಶಿವಮೊಗ್ಗ: ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ 2025-26ನೇ ಸಾಲಿನ ಬಿಎಸ್ಸಿ ನರ್ಸಿಂಗ್ ಮತ್ತು ಜಿಎನ್‌ಎಂ ನರ್ಸಿಂಗ್ ಕೋರ್ಸ್‌ಗಳಲ್ಲಿ ಅಧ್ಯಯನ ಮಾಡುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ವಿದ್ಯಾರ್ಥಿಗಳು Seva Sindhu portal ಲಿಂಕ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದ್ದು, ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಹಾಗೂ ಎನ್‌ಪಿಸಿಐ ಮ್ಯಾಪಿಂಗ್ ಆಕ್ಟಿವ್ ಆಗಿರುವುದನ್ನು ಖಚಿತಪಡಿಸಿಕೊಳ್ಳಬೇಕು.

ಅರ್ಹತಾ ಮಾನ ದಂಡಗಳಂತೆ, ಅಭ್ಯರ್ಥಿಗಳು ಕರ್ನಾಟಕದ ನಿವಾಸಿಯಾಗಿರಬೇಕು. ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಅಥವಾ ಪಾರ್ಸಿ ಜನಾಂಗದವರು ಆಗಿರಬೇಕು. ಕೋರ್ಸ್ ಸಂಪೂರ್ಣ ಕಾಲಾವಧಿಯದ್ದಾಗಿರಬೇಕು ಮತ್ತು ಕುಟುಂಬದ ವಾರ್ಷಿಕ ಆದಾಯ ₹2.50 ಲಕ್ಷ ಮೀರಿರಬಾರದು.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು https://dom.karnataka.gov.in ವೆಬ್‌ಸೈಟ್‌ಗೆ ಭೇಟಿ ನೀಡಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

Read More :E-khata :ಗುಡ್ ನ್ಯೂಸ್! ನಾಳೆಯಿಂದ ಮನೆ ಬಾಗಿಲಿಗೆ ‘ಇ-ಖಾತಾ’ ಸೇವೆ – ಆಸ್ತಿ ಮಾಲೀಕರಿಗೆ ಸರ್ಕಾರದ ಗಿಫ್ಟ್!

Leave a Comment