SAGARA ; ಸಾಲಬಾಧೆ ತಾಳಲಾರದೆ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ರಾತ್ರಿ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಯಡೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೇರುಬೀಸ್ ಗ್ರಾಮದ ರಾಮಚಂದ್ರ (48) ಆತ್ಮಹತ್ಯೆ ಮಾಡಿಕೊಂಡ ರೈತ.

ರಾಷ್ಟ್ರೀಕೃತ ಬ್ಯಾಂಕ್, ಫೈನಾನ್ಸ್, ಕೃಷಿ ಪತ್ತಿನ ಸಹಕಾರಿ ಸಂಘ, ಶ್ರೀ ಶಕ್ತಿ ಸಂಘ ಸೇರಿದಂತೆ ವಿವಿಧೆಡೆಗಳಲ್ಲಿ ವಿಪರೀತ ಸಾಲ ಮಾಡಿದ್ದು ಸಾಲಬಾಧೆ ತಡೆಯಲಾರದೆ ಮನೆಯ ಹಿಂಭಾಗದ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೃತನಿಗೆ ಪತ್ನಿ, ಪುತ್ರಿ ಮತ್ತು ಪುತ್ರ ಇದ್ದಾರೆ. ಘಟನೆ ಸಂಬಂಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.