SHIVAMOGGA ; ಖ್ಯಾತ ಛಾಯಾಗ್ರಾಹಕ ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆಯ ಫೋಟೊಗ್ರಾಫರ್ ಶಿವಮೊಗ್ಗ ನಂದನ್ (57) ಹೃದಯಾಘಾತದಿಂದ ನಿಧನರಾಗಿದ್ದಾರೆ.

ಅನಾರೋಗ್ಯ ಹಿನ್ನೆಲೆ ಕಳೆದ ರಾತ್ರಿ ನಂಜಪ್ಪ ಆಸ್ಪತ್ರೆಗೆ ದಾಖಲಾಗಿದ್ದರು. ಈ ಸಂದರ್ಭ ಹೃದಯಾಘಾತ ಸಂಭವಿಸಿ ಕೊನೆಯುಸಿರೆಳೆದಿದ್ದಾರೆ.

ಶಿವಮೊಗ್ಗ ನಂದನ್ ಅವರ ಪಾರ್ಥೀವ ಶರೀರವನ್ನು ಶಿವಮೊಗ್ಗ ರೈಲ್ವೆ ನಿಲ್ದಾಣ ಸಮೀಪ (ಬ್ಲಡ್ ಬ್ಯಾಂಕ್ ಬಳಿ) ಇರುವ ಅವರ ಮನೆಯಲ್ಲಿ ಅಂತಿಮ ದರ್ಶನಕ್ಕೆ ಇರಿಸಲಾಗಿದೆ. ಮೃತರಿಗೆ ಪತ್ನಿ, ಪುತ್ರ ಮತ್ತು ಪುತ್ರಿ ಇದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.