ಹೊಸನಗರ

ಮಾರುತಿಪುರ ಗ್ರಾ.ಪಂ. ಉಪಾಧ್ಯಕ್ಷರಾಗಿ ಇಂದ್ರೇಶ್ ಅವಿರೋಧ ಆಯ್ಕೆ

ಹೊಸನಗರ ; ಮಾರುತಿಪುರ ಗ್ರಾ.ಪಂ. ಉಪಾಧ್ಯಕ್ಷರಾಗಿ ಇಂದ್ರೇಶ್ ಅವಿರೋಧ ಆಯ್ಕೆಯಾದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ತೆರವಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆದಿದ್ದು ಕಾಂಗ್ರೆಸ್ ಬೆಂಬಲಿತ ಸದಸ್ಯ ಇಂದ್ರೇಶ್‌ ಅವಿರೋಧವಾಗಿ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಕೃಷಿ ಅಧಿಕಾರಿ ಮಾರುತಿ ಕಾರ್ಯನಿರ್ವಹಿಸಿದರು.

ಈ ವೇಳೆ ನಡೆದ ಅಭಿನಂದನಾ ಸಭೆಯಲ್ಲಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಮೌಳಿ, ತಾಲ್ಲೂಕಿನಲ್ಲಿ ಕಾಂಗ್ರೆಸ್ ಪಕ್ಷ ಹೆಮ್ಮರವಾಗಿ ಬೆಳೆಯುತ್ತಿದ್ದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ನಿಷ್ಠೆಯಿಂದ ಬಡವರ ಕೆಲಸ ಮಾಡುತ್ತಿದ್ದಾರೆ ಎಂದರು‌.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಕಾಂಗ್ರೆಸ್ ಪಕ್ಷ ವಿಧಾನಸಭೆ ಚುನಾವಣೆಯಲ್ಲಿ 137 ಸ್ಥಾನಗಳನ್ನು ಪಡೆದು ರಾಜ್ಯದಲ್ಲಿ ಆಡಳಿತ ನಡೆಸುತ್ತಿದೆ. ನಮ್ಮ ಸರ್ಕಾರ 5 ಗ್ಯಾರಂಟಿ ಯೋಜನೆಯು ಪ್ರತಿಯೊಬ್ಬರಿಗೂ ಅನುಕೂಲಕರವಾಗಿದೆ ನಮ್ಮ ತಾಲ್ಲೂಕಿನಲ್ಲಿ ಪ್ರತಿಯೊಬ್ಬರು ಗ್ಯಾರಂಟಿ ಯೋಜನೆಯ ಲಾಭ ಪಡೆದುಕೊಳ್ಳುತ್ತಿದ್ದಾರೆ. ಪ್ರತಿಯೊಂದು ಕುಟುಂಬಗಳಿಗೂ ಇದರ ಪ್ರಯೋಜನ ಪಡೆಯಲು ನಮ್ಮ ಕಾರ್ಯಕರ್ತರ ಶ್ರಮ ಅಮೂಲ್ಯವಾಗಿದೆ ಇದರಿಂದ ನಮ್ಮ ಕಾರ್ಯಕರ್ತರು ಮಿಚ್ಚಿನಂತೆ ಸೇವೆ ಸಲ್ಲಿಸುತ್ತಿದ್ದು ಮುಂದೆ ಬರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯತಿ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳು ಜಯಶಾಲಿಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದರು.

ಈ ಸಂದರ್ಭದಲ್ಲಿ ತಾಲ್ಲೂಕು ಗ್ಯಾರಂಟಿ ಯೋಜನೆಯ ಅಧ್ಯಕ್ಷ ಚಿದಂಬರ, ಗ್ರಾ.ಪಂ. ಅಧ್ಯಕ್ಷೆ ಜಯಮ್ಮ, ಗ್ರಾಮ ಪಂಚಾಯತಿಯ ಎಲ್ಲ ಸದಸ್ಯರು ಪಕ್ಷದ ಮುಖಂಡರು ಉಪಸ್ಥಿತರಿದ್ದರು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>