ಹೊಸನಗರ

ಹೊಸನಗರ ತಾಲೂಕು GPT ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ; ಅಧ್ಯಕ್ಷರಾಗಿ ಮೇಘರಾಜ್ ಅಧಿಕಾರ ಸ್ವೀಕಾರ

ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಹೊಸನಗರ ತಾಲೂಕು ಘಟಕದ 2026–31ನೇ ಸಾಲಿನ ಅವಧಿಗೆ ಆಯ್ಕೆಯಾದ ನೂತನ ಪದಾಧಿಕಾರಿಗಳು ಹಾಗೂ ನಿರ್ದೇಶಕರ ಪದಗ್ರಹಣ ಸಮಾರಂಭ ಗುರುವಾರ ನಡೆಯಿತು.

ಹೊಸನಗರ ತಾಲೂಕು GPT ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ GPT

ಹೊಸನಗರ : ಕರ್ನಾಟಕ ರಾಜ್ಯ (6–8) ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಹೊಸನಗರ ತಾಲೂಕು ಘಟಕದ 2026–31ನೇ ಸಾಲಿನ ಅವಧಿಗೆ ಆಯ್ಕೆಯಾದ ನೂತನ ಪದಾಧಿಕಾರಿಗಳು ಹಾಗೂ ನಿರ್ದೇಶಕರ ಪದಗ್ರಹಣ ಸಮಾರಂಭ ಗುರುವಾರ ಸಂಜೆ ನಡೆಯಿತು.

WhatsApp Group Join Now
Telegram Group Join Now
Instagram Group Join Now

ಪಟ್ಟಣದ ಗಾಯತ್ರಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಪದಾಧಿಕಾರಿಗಳು ಅಧಿಕಾರ ಸ್ವೀಕರಿಸಿದರು.

ತಾಲೂಕು ಘಟಕದ ಅಧ್ಯಕ್ಷರಾಗಿ ಮೇಘರಾಜ್ ಹೆಚ್.ಎಂ., ಪ್ರಧಾನ ಕಾರ್ಯದರ್ಶಿಯಾಗಿ ನಾಗರಾಜ ಕೆ.ಬಿ. ಹಾಗೂ ಕೋಶಾಧ್ಯಕ್ಷರಾಗಿ ಸುನೀಲ್ ಕುಮಾರ್ ಹೆಚ್.ಎಸ್. ಅಧಿಕಾರ ವಹಿಸಿಕೊಂಡರು.

ಈ ಸಂದರ್ಭದಲ್ಲಿ ನಿರ್ದೇಶಕರಾಗಿ ಆಯ್ಕೆಯಾದ ಧನಂಜಯ ಸಿ., ಕು. ವಿಜಯಲಕ್ಷ್ಮಿ ಸಿ., ಶ್ಯಾಮಲಾ ಇ.ಇ., ಶಾಲಿನಿ ಜಿ.ಎಲ್., ಕು. ಜಿಷಾ ಎ.ಜಿ., ಮಂಜುನಾಥ್ ಎಸ್., ಆಕಾಶ್ ಹೆಚ್.ಎಸ್. ಹಾಗೂ ಕು. ಶೃತಿ ಹೆಚ್.ಎಸ್., ಬಿಇಒ ವೈ. ಗಣೇಶ್, ನೌಕರರ ಸಂಘದ ಅಧ್ಯಕ್ಷ ಬಂಡಿ ಸೋಮಶೇಖರ್, ಬಡ್ತಿ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಸತೀಶ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪುಟ್ಟಸ್ವಾಮಿ, ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಧರ್ಮಪ್ಪ, ಕರಿಬಸಪ್ಪ, ಬಸವಣ್ಯಪ್ಪ, ಜಗದೀಶ್ ಕಾಗಿನೆಲ್ಲಿ, ಚುನಾವಣಾಧಿಕಾರಿ ನಾಸಿರ್ ಅಹಮದ್, ಪ್ರಾಥಮಿಕ ಶಿ.ಸಂ. ಕಾರ್ಯದರ್ಶಿ ಈಶ್ವರಪ್ಪ, ಜಿಲ್ಲಾ ಸೇವಾನಿರತ ಪದವೀಧರ ಸಂಘದ ಅಧ್ಯಕ್ಷ ಸತ್ಯನಾರಾಯಣ ಎನ್.ಎಸ್. ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಸಂಘದ ನೂತನ ಪದಾಧಿಕಾರಿಗಳಿಗೆ ಶಿಕ್ಷಕರು ಅಭಿನಂದನೆ ಸಲ್ಲಿಸಿ, ಶಿಕ್ಷಕರ ಸಮಸ್ಯೆಗಳ ಪರಿಹಾರ ಹಾಗೂ ವೃತ್ತಿಪರ ಹಿತಾಸಕ್ತಿಗಳ ರಕ್ಷಣೆಗೆ ಸಂಘ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲಿ ಎಂದು ಶುಭ ಹಾರೈಸಿದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!