Hosanagara

ಏ.24 ರಂದು ರಿಪ್ಪನ್‌ಪೇಟೆಯಲ್ಲಿ ಹೊಸನಗರ, ತೀರ್ಥಹಳ್ಳಿ ಮತ್ತು ಸಾಗರ ತಾಲ್ಲೂಕಿನ ತೋಟಗಾರಿಗೆ ಇಲಾಖೆಯ ಕಛೇರಿಗಳಿಂದ ರೈತರಿಗೆ ಮಾಹಿತಿ ಕಾರ್ಯಕ್ರಮ

ಹೊಸನಗರ ; ಶಿವಮೊಗ್ಗ ಜಿಲ್ಲೆಯ ಮಲೆನಾಡಿನ ಹೊಸನಗರ, ತೀರ್ಥಹಳ್ಳಿ ಹಾಗೂ ಸಾಗರ ತಾಲ್ಲೂಕಿನ ತೋಟಗಾರಿಗೆ ಇಲಾಖೆಯ ಕಛೇರಿಗಳಿಗೆ ಸಂಬಂಧಿಸಿದಂತೆ 2026-27, 2027-28 ಹಾಗೂ 2028-29ನೇ ಸಾಲಿನ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಹೋಬಳಿವಾರು ಅಡಿಕೆ ಮತ್ತು ಕಾಳುಮೆಣಸು ಬೆಳೆಗಳ ಉದ್ದೇಶಿತ ಕರಡು ಟರ್ಮ್‌ ಶೀಟ್‌ಗಳನ್ನು ತಯಾರಿಸಲಾಗಿದ್ದು, ಈ ಮೂರು ತಾಲ್ಲೂಕುಗಳ ಹೋಬಳಿವಾರು ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳ ಕರಡು ಟರ್ಮ್ ಶೀಟ್‌ಗಳ ಬಗ್ಗೆ ಹೊಸನಗರ, ತೀರ್ಥಹಳ್ಳಿ ಹಾಗೂ ಸಾಗರ ತಾಲ್ಲೂಕುಗಳ ರೈತರಿಗೆ ಮಾಹಿತಿಯನ್ನು ನೀಡುವ ಕಾರ್ಯಕ್ರಮವನ್ನು ಏ.24 ರಂದು ಮಧ್ಯಾಹ್ನ 3-00 ಗಂಟೆಗೆ ರಿಪ್ಪನ್‌ಪೇಟೆ ಗ್ರಾಮ ಪಂಚಾಯಿತಿ ಆವರಣದಲ್ಲಿ ಏರ್ಪಡಿಸಲಾಗಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಈ ಕಾರ್ಯಕ್ರಮದಲ್ಲಿ ಹೊಸನಗರ, ತೀರ್ಥಹಳ್ಳಿ ಹಾಗೂ ಸಾಗರ ತಾಲ್ಲೂಕುಗಳ ರೈತರು ಭಾಗವಹಿಸಿ ಮಾಹಿತಿಯನ್ನು ಪಡೆಯಬೇಕಾಗಿ ಹಾಗೂ ತಮ್ಮ ಸಲಹೆಗಳನ್ನು ನೀಡುವಂತೆ ತೀರ್ಥಹಳ್ಳಿ, ಸಾಗರ ಮತ್ತು ಹೊಸನಗರ ಹಿರಿಯ ಸಹಾಯಕ ತೋಟಗಾರಿಗೆ ನಿರ್ದೇಶಕರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:

  • ಪುಟ್ಟಾನಾಯ್ಕ, ಹಿರಿಯ ಸಹಾಯಕ ತೋಟಗಾರಿಗೆ ನಿರ್ದೇಶಕರು, ಹೊಸನಗರ ಮೊ : 9591695327
  • ಸೋಮಶೇಖರ ಕೆ, ಹಿರಿಯ ಸಹಾಯಕ ತೋಟಗಾರಿಗೆ ನಿರ್ದೇಶಕರು, ತೀರ್ಥಹಳ್ಳಿ ಮೊ : 9108280642
  • ಮಹಾಬಲೇಶ್ವರ ಹೆಗಡೆ, ಹಿರಿಯ ಸಹಾಯಕ ತೋಟಗಾರಿಗೆ ನಿರ್ದೇಶಕರು, ಸಾಗರ ಮೊ : 7353346902
ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>