ರಿಪ್ಪನ್‌ಪೇಟೆ ; ಬ್ರಹ್ಮಶ್ರೀನಾರಾಯಣಗುರು ಧರ್ಮಪಾಲನಾ ಸಂಘ ರಾಜ್ಯ ಹಾಗೂ ಶಿವಮೊಗ್ಗ ಜಿಲ್ಲೆ ಮಹಿಳಾ ಘಟಕದವರು ಅಂತರಾಷ್ಟ್ರೀಯ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಏಪ್ರಿಲ್ 13 ರಂದು ಭಾನುವಾರ ಬೆಳಗ್ಗೆ 11 ಗಂಟೆಗೆ ರಿಪ್ಪನ್‌ಪೇಟೆಯ ರಾಮಮಂದಿರದಲ್ಲಿ ವಿಶ್ವಮಹಿಳಾ ದಿನಾಚರಣೆ ಮತ್ತು ಸಾಧಕರಿಗೆ ಸನ್ಮಾನ ಸಮಾರಂಭವನ್ನು ಆಯೋಜಿಸಲಾಗಿದೆ ಎಂದು ಬಿ.ಎಸ್.ಎನ್.ಡಿ.ಪಿ ಘಟಕದ ರಾಜ್ಯ ಮಹಿಳಾ ಪ್ರಧಾನ ಕಾರ್ಯದರ್ಶಿ ಲೇಖನ ಚಂದ್ರನಾಯ್ಕ್ ತಿಳಿಸಿದರು.
ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಮಾಜಿ ಸಚಿವ ಕಾಗೋಡು ತಿಮ್ಮಪ್ಪನವರು ಮತ್ತು ಶಾಸಕ ರಾಜ್ಯ ಅರಣ್ಯ ಕೈಗಾರಿಕಾಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಉದ್ಘಾಟಿಸುವರು. ಸಮಾರಂಭದ ಅಧ್ಯಕ್ಷತೆಯನ್ನು ಬಿ.ಎಸ್.ಎನ್.ಡಿ.ಪಿ ಘಟಕದ ರಾಜ್ಯ ಮಹಿಳಾ ಪ್ರಧಾನ ಕಾರ್ಯದರ್ಶಿ ಲೇಖನ ಚಂದ್ರನಾಯ್ಕ್ ವಹಿಸುವರು.
ವಿಶೇಷ ಆಹ್ವಾನಿತರಾಗಿ ಬಿ.ಎಸ್.ಎನ್.ಡಿ.ಪಿ. ಸಂಘಟನೆಯ ರಾಜ್ಯಾಧ್ಯಕ್ಷ ಸೈದಪ್ಪ ಕೆ.ಗುತ್ತೇದಾರ್ ಮತ್ತು ಪ್ರಧಾನ ಕಾರ್ಯದರ್ಶಿ ಕಾಂತರಾಜ್ ಆರ್ಯ ಭಾಗವಹಿಸುವರು. ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ಬಿ.ಸ್ವಾಮಿರಾವ್, ಮಾಜಿ ಸಚಿವ ಹರತಾಳು ಹಾಲಪ್ಪ, ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್, ಮಾಜಿ ಸದಸ್ಯ ಬಂಡಿ ರಾಮಚಂದ್ರ, ಇನ್ನಿತರ ಹಲವರು ಭಾಗವಹಿಸುವರು.
ಇದೇ ಸಂದರ್ಭದಲ್ಲಿ ಸಾಧನೆಗೈದ ಗಣ್ಯರಾದ ಹೊಸನಗರ ತಾಲ್ಲೂಕು ಬಿಸಿಎಂ ಇಲಾಖೆಯ ಸಹಾಯಕ ನಿರ್ದೇಶಕಿ ಕು. ಕಲಾವತಿ, ರಾಷ್ಟ್ರ ಪ್ರಶಸ್ತಿ ವಿಜೇತ ಜಾನಪದ ಕಲಾವಿದೆ ಡಾ. ಜಯಲಕ್ಷ್ಮಿ ನಾರಾಯಣಪ್ಪ, ಸೂಲಗಿತ್ತಿ ಜಯಮ್ಮ, ಜಾನಪದ ಕಲಾವಿದ ಲಕ್ಷ್ಮಿ ರಾಮಪ್ಪ, ಕರಕುಶಲತೆಯಲ್ಲಿ ಅತಿ ಹೆಚ್ಚು ಪರಿಣಿತೆ ರತ್ನಮ್ಮ ಜನಾರ್ಧನ, ಈಡಿಗ ಜಾನಪದ ಕಲಾವಿದ ಲಕ್ಷ್ಮಿ ಬಂಗಾರಪ್ಪ ಈ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದು ರಾಜ್ಯ ಮಹಿಳಾ ಪ್ರಧಾನ ಕಾರ್ಯದರ್ಶಿ ಲೇಖನ ಚಂದ್ರನಾಯ್ಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.