Ripponpete

ಏ. 13 ರಂದು ರಿಪ್ಪನ್‌ಪೇಟೆ ರಾಮಮಂದಿರದಲ್ಲಿ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ ; ಸಾಧಕರಿಗೆ ಸನ್ಮಾನ

ರಿಪ್ಪನ್‌ಪೇಟೆ ; ಬ್ರಹ್ಮಶ್ರೀನಾರಾಯಣಗುರು ಧರ್ಮಪಾಲನಾ ಸಂಘ ರಾಜ್ಯ ಹಾಗೂ ಶಿವಮೊಗ್ಗ ಜಿಲ್ಲೆ ಮಹಿಳಾ ಘಟಕದವರು ಅಂತರಾಷ್ಟ್ರೀಯ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಏಪ್ರಿಲ್ 13 ರಂದು ಭಾನುವಾರ ಬೆಳಗ್ಗೆ 11 ಗಂಟೆಗೆ ರಿಪ್ಪನ್‌ಪೇಟೆಯ ರಾಮಮಂದಿರದಲ್ಲಿ  ವಿಶ್ವಮಹಿಳಾ ದಿನಾಚರಣೆ ಮತ್ತು ಸಾಧಕರಿಗೆ ಸನ್ಮಾನ ಸಮಾರಂಭವನ್ನು ಆಯೋಜಿಸಲಾಗಿದೆ ಎಂದು ಬಿ.ಎಸ್.ಎನ್.ಡಿ.ಪಿ ಘಟಕದ ರಾಜ್ಯ ಮಹಿಳಾ ಪ್ರಧಾನ ಕಾರ್ಯದರ್ಶಿ ಲೇಖನ ಚಂದ್ರನಾಯ್ಕ್ ತಿಳಿಸಿದರು.

WhatsApp Group Join Now
Telegram Group Join Now
Instagram Group Join Now

ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಮಾಜಿ ಸಚಿವ ಕಾಗೋಡು ತಿಮ್ಮಪ್ಪನವರು ಮತ್ತು ಶಾಸಕ ರಾಜ್ಯ ಅರಣ್ಯ ಕೈಗಾರಿಕಾಭಿವೃದ್ದಿ ನಿಗಮದ ಅಧ್ಯಕ್ಷ  ಗೋಪಾಲಕೃಷ್ಣ ಬೇಳೂರು ಉದ್ಘಾಟಿಸುವರು. ಸಮಾರಂಭದ ಅಧ್ಯಕ್ಷತೆಯನ್ನು ಬಿ.ಎಸ್.ಎನ್.ಡಿ.ಪಿ ಘಟಕದ ರಾಜ್ಯ ಮಹಿಳಾ ಪ್ರಧಾನ ಕಾರ್ಯದರ್ಶಿ ಲೇಖನ ಚಂದ್ರನಾಯ್ಕ್ ವಹಿಸುವರು.

ವಿಶೇಷ ಆಹ್ವಾನಿತರಾಗಿ ಬಿ.ಎಸ್.ಎನ್.ಡಿ.ಪಿ. ಸಂಘಟನೆಯ ರಾಜ್ಯಾಧ್ಯಕ್ಷ ಸೈದಪ್ಪ ಕೆ.ಗುತ್ತೇದಾರ್ ಮತ್ತು ಪ್ರಧಾನ ಕಾರ್ಯದರ್ಶಿ ಕಾಂತರಾಜ್ ಆರ್ಯ ಭಾಗವಹಿಸುವರು. ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ಬಿ.ಸ್ವಾಮಿರಾವ್, ಮಾಜಿ ಸಚಿವ ಹರತಾಳು ಹಾಲಪ್ಪ, ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್, ಮಾಜಿ ಸದಸ್ಯ ಬಂಡಿ ರಾಮಚಂದ್ರ, ಇನ್ನಿತರ ಹಲವರು ಭಾಗವಹಿಸುವರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಇದೇ ಸಂದರ್ಭದಲ್ಲಿ ಸಾಧನೆಗೈದ ಗಣ್ಯರಾದ ಹೊಸನಗರ ತಾಲ್ಲೂಕು ಬಿಸಿಎಂ ಇಲಾಖೆಯ ಸಹಾಯಕ ನಿರ್ದೇಶಕಿ ಕು‌. ಕಲಾವತಿ, ರಾಷ್ಟ್ರ ಪ್ರಶಸ್ತಿ ವಿಜೇತ ಜಾನಪದ ಕಲಾವಿದೆ ಡಾ. ಜಯಲಕ್ಷ್ಮಿ ನಾರಾಯಣಪ್ಪ, ಸೂಲಗಿತ್ತಿ  ಜಯಮ್ಮ, ಜಾನಪದ ಕಲಾವಿದ ಲಕ್ಷ್ಮಿ ರಾಮಪ್ಪ, ಕರಕುಶಲತೆಯಲ್ಲಿ ಅತಿ ಹೆಚ್ಚು ಪರಿಣಿತೆ ರತ್ನಮ್ಮ ಜನಾರ್ಧನ, ಈಡಿಗ ಜಾನಪದ ಕಲಾವಿದ ಲಕ್ಷ್ಮಿ ಬಂಗಾರಪ್ಪ ಈ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದು ರಾಜ್ಯ ಮಹಿಳಾ ಪ್ರಧಾನ ಕಾರ್ಯದರ್ಶಿ ಲೇಖನ ಚಂದ್ರನಾಯ್ಕ್  ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!