ಹೊಸನಗರ

ಹೊಸನಗರ ಬಿಜೆಪಿ ಮಂಡಲದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ |  ನಾಡು-ನುಡಿ ಭಾಷೆಗಾಗಿ ಮಹಿಳೆಯರು ಪ್ರಾಣ ತ್ಯಾಗ ಮಾಡಿದ್ದಾರೆ ; ಆಶಾ ರವೀಂದ್ರ

ಹೊಸನಗರ ; ಭಾರತ ದೇಶದಲ್ಲಿ ಮಹಿಳೆಯರಿಗೆ ಒಂದು ಪವಿತ್ರ ಸ್ಥಾನವಿದೆ ಅದರಂತೆ ಹಿಂದೆ ಮಹಿಳೆಯರು ನಾಡು, ನುಡಿ ಭಾಷೆಗಾಗಿ ಪ್ರಾಣ ತ್ಯಾಗ ಮಾಡಿದವರನ್ನು ಇಂದು ನೆನಪಿಸಿಕೊಳ್ಳಬೇಕಾಗಿದೆ ಅವರ ಮಾರ್ಗದರ್ಶನದಲ್ಲಿ ನಾವು ನೀವೆಲ್ಲರೂ ನಡೆಯಬೇಕಾಗಿದೆ ಎಂದು ಬಿ.ಜೆ.ಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಆಶಾ ರವೀಂದ್ರ ಹೇಳಿದರು.

WhatsApp Group Join Now
Telegram Group Join Now
Instagram Group Join Now

ಇಲ್ಲಿನ ಬಿಜೆಪಿ ಕಛೇರಿಯ ಆವರಣದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಗಿದ್ದು ಈ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಈ ಕಾರ್ಯಕ್ರಮವನ್ನು ಜಿಲ್ಲಾ ಉಪಾಧ್ಯಕ್ಷೆ ಹಾಗೂ ಪ್ರಭಾರಿಯಾದ ಪದ್ಮಿನಿರಾವ್‌ ಉದ್ಘಾಟಿಸಿ, ಮಹಿಳೆಯರ ಬಗ್ಗೆ ಹಾಗೂ ಮಹಿಳಾ ದಿನಾಚರಣೆಯ ಬಗ್ಗೆ ಮಾತನಾಡಿದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಈ ಕಾರ್ಯಕ್ರಮದಲ್ಲಿ ಮಹಿಳಾ ಸಂರಕ್ಷಣೆ ಮತ್ತು ಕಾನೂನು ಜಾಗೃತಿ ವಿಷಯದ ಕುರಿತು ಶರಣರ ಸಾಹಿತ್ಯ ಪರಿಷತ್ ಅಧ್ಯಕ್ಷೆ ಶಶಿಕಲಾ ಮಲ್ಲಪ್ಪ ಸವಿಸ್ತಾರವಾಗಿ ವಿವರಿಸಿದರು.

ಹೊಸನಗರ ಬಿಜೆಪಿ ಮಂಡಲದ ಅಧ್ಯಕ್ಷ ಎನ್ ಸತೀಶ್, ಪ್ರಧಾನ ಕಾರ್ಯದರ್ಶಿ ರಾಘವೇಂದ್ರ, ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸುಗುಣ ಅಶೋಕ, ಮಂಡಲದ ಉಪಾಧ್ಯಕ್ಷೆ ಮಂಜುಳಾ ಕೇತಾರ್ಜಿರಾವ್, ರುಕ್ಮಿಣಿ ರಾಜು, ಮಂಡಲದ ಮಹಿಳಾ ಪ್ರಭಾರಿ ಸುಮಾ ಸುರೇಶ್, ರೇಖಾ ರವಿ, ಕಛೇರಿಯ ವ್ಯವಸ್ಥಾಪಕಿ ಕಾರಣಗಿರಿ ಕವ್ಯಾ, ಜವಾಬ್ದಾರಿಯುತ ಮಹಿಳೆಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!