ಹೂವಿನಕೋಣೆ ಶಾಲೆ ನೀರಿನ ಟ್ಯಾಂಕ್‌ಗೆ ವಿಷಪ್ರಾಶನ ತನಿಖೆ ಚುರುಕು ; ಘಟನಾ ಸ್ಥಳಕ್ಕೆ ಎಸ್‌ಪಿ ಭೇಟಿ

Written by Mahesh Hindlemane

Published on:

ಹೊಸನಗರ ; ತಾಲೂಕಿನ ಹೂವಿನಕೋಣೆ ಸರಕಾರಿ ಪ್ರಾಥಮಿಕ ಶಾಲೆಯ ಕುಡಿಯುವ ನೀರಿನ ಟ್ಯಾಂಕ್‌ಗೆ ವಿಷ ಬೆರೆಸಿದ ಪ್ರಕರಣದ ಕುರಿತು ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಪ್ರಕರಣವನ್ನು ಭೇದಿಸಲು ವಿಶೇಷ ತಂಡವನ್ನು ರಚಿಸಿದ್ದು, ಹಲವು ಆಯಾಮಗಳಿಂದ ಆರೋಪಿಗಳ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ. ಶನಿವಾರ ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ಕುಮಾರ್, ತೀರ್ಥಹಳ್ಳಿ ಡಿವೈಎಸ್‌ಪಿ ಅರವಿಂದ್, ಸಿಪಿಐ ಗುರಣ್ಣ ಎಸ್ ಹೆಬ್ಬಾಳ್, ಪಿಎಸ್‌ಐ ಶಂಕರಗೌಡ ಪಾಟೀಲ್ ನೇತೃತ್ವದಲ್ಲಿ ಪೊಲೀಸರ ತಂಡ ಶಾಲೆಗೆ ಭೇಟಿ ನೀಡಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಶಾಲಾ ಮಕ್ಕಳು, ಪೋಷಕರು, ಅಭಿವೃದ್ಧಿ ಸಮಿತಿ ಸದಸ್ಯರು, ಗ್ರಾಮಸ್ಥರ ಹಾಗೂ ಶಾಲಾ ಶಿಕ್ಷಕರ ಬಳಿ ಅಗತ್ಯ ಮಾಹಿತಿ ಕಲೆ ಹಾಕಿದ್ದಾರೆ. ಇನ್ನು ಎರಡ್ಮೂರು ದಿನಗಳ ಒಳಗಾಗಿ ಆರೋಪಿಗಳನ್ನು ಪತ್ತೆ ಹಚ್ಚುವ ಸಾಧ್ಯತೆ ಇದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Leave a Comment