ಹೊಸನಗರ ; ಇತಿಹಾಸ ಪ್ರಸಿದ್ಧ ತಾಲ್ಲೂಕಿನ ಕೋಡೂರು ಸಮೀಪದ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಿಯ ನಾಲ್ಕನೇ ಜಾತ್ರೆ ಶುಕ್ರವಾರ ನಡೆಲಿದ್ದು, ಕ್ಷೇತ್ರದ ಮಾಜಿ ಶಾಸಕ, ದೇವಸ್ಥಾನದ ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಬಿ.ಸ್ವಾಮಿರಾವ್ ಅವರಿಗೆ ಜಾತ್ರಾ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷ, ಶಾಸಕ ಗೋಪಾಲಕೃಷ್ಣ ಬೇಳೂರು ಸೂಚನೆ ಮೇರೆಗೆ ಕಾರ್ಯಾಧ್ಯಕ್ಷ ಕಲಗೋಡು ರತ್ನಾಕರ ಸಲಹೆಯಂತೆ ಸಮಿತಿಯ ಸದಸ್ಯರು ಗುರುವಾರ ಸ್ವಾಮಿರಾವ್ ಸ್ವಗೃಹಕ್ಕೆ ತೆರಳಿ ಆತ್ಮೀಯವಾಗಿ ಸನ್ಮಾನಿಸುವ ಮೂಲಕ ವಿಶೇಷ ಆಹ್ವಾನ ನೀಡಿದರು.
ಈ ವೇಳೆ ಸ್ವಾಮಿರಾವ್ ಮಾತನಾಡಿ, ಅನೇಕ ಭಕ್ತಾದಿಗಳು ತನು-ಮನ-ಧನ ನೀಡಿದ ಸಹಕಾರದಿಂದ ಕೋಟ್ಯಂತರ ರೂ. ವೆಚ್ಚದಲ್ಲಿ ನೂತನ ಶಿಲಾಮಯ ದೇಗುಲ ನಿರ್ಮಾಣ ಸಾಧ್ಯವಾಯಿತು. ನಾನು ಇಲ್ಲಿ ನಿಮಿತ್ತ ಮಾತ್ರ. ಕೆರೆಯ ನೀರನ್ನು ಕೆರೆಗೆ ಚೆಲ್ಲಿ ಎಂಬ ನಾನ್ನುಡಿಯಂತೆ ಕಾರ್ಯ ನಿರ್ವಹಿಸಿದೆ ವಿನಃ ಇದರಲ್ಲಿ ಯಾವುದೇ ಹೆಚ್ಚುಗಾರಿಕೆ ನನಗಿಲ್ಲ ಎಂದರು.
ಈ ವೇಳೆ ಜಾತ್ರಾ ಸಮಿತಿ ಸದಸ್ಯರಾದ ಬಿ.ಜಿ.ಚಂದ್ರಮೌಳಿ, ಎಂ.ಪಿ.ಸುರೇಶ್, ಪುಟ್ಟಪ್ಪ, ಸುಧೀರ್ ಭಟ್, ರಂಜಿತ್, ಗಣೇಶ್, ಕೋಡೂರು ಗ್ರಾಮ ಪಂಚಾಯತಿ ಅಧ್ಯಕ್ಷ ಜಯಪ್ರಕಾಶ್ ಶೆಟ್ಟಿ, ಸದಸ್ಯ ಯೋಗೇಂದ್ರಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.