THIRTHAHALLI ; 2024-24ನೇ ಸಾಲಿಗೆ ಕೃಷಿ ಯಾಂತ್ರೀಕರಣ ಉಪ ಅಭಿಯಾನ ಯೋಜನೆಯ ತೋಟಗಾರಿಕೆಯಲ್ಲಿ ಯಾಂತ್ರೀಕರಣ ಕಾರ್ಯಕ್ರಮದಡಿ ವಿವಿಧ ಯಂತ್ರೋಪಕರಣಗಳಿಗೆ ಅರ್ಜಿ ಕರೆಯಲಾಗಿದೆ.
ಯೋಜನೆಯ ಲಾಭ ಪಡೆಯಲಿಚ್ಚಿಸುವ ರೈತರು ತೀರ್ಥಹಳ್ಳಿ ತಾಲ್ಲೂಕಿನ ತೋಟಗಾರಿಕಾ ಇಲಾಖಾ ಕಛೇರಿಯಲ್ಲಿ ನವೆಂಬರ್ 5ರೊಳಗೆ ಅರ್ಜಿಯನ್ನು ಸಲ್ಲಿಸಲು ಕೋರಿದೆ.

ನಿಗದಿತ ಗುರಿಗಿಂತ ಹೆಚ್ಚಿನ ಅರ್ಜಿಗಳು ಬಂದಲ್ಲಿ ಜೇಷ್ಟತೆಯ ಪ್ರಕಾರ ಹಾಗೂ ಲಭ್ಯವಾಗುವ ಅನುದಾನದ ಮೀಸಲಾತಿಯಂತೆ ಅರ್ಜಿಗಳನ್ನು ಪರಿಗಣಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ತೀರ್ಥಹಳ್ಳಿ ತಾಲ್ಲೂಕಿನ ಹಿರಿಯ ತೋಟಗಾರಿಕಾ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಲು ಕೋರಿದೆ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.