ಶಿವಮೊಗ್ಗ ; ರಾಜ್ಯದಲ್ಲಿ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನವೆಂಬರ್ 17ರಿಂದ ಎರಡು ದಿನಗಳ ಕಾಲ ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲಿ ಮಳೆಯಾಗಲಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆ ಮೋಡಕವಿದ ವಾತಾವರಣವಿದ್ದು, ಚಳಿ ಆರಂಭವಾಗಿದೆ.
ನವೆಂಬರ್ 17ರಿಂದ ದಕ್ಷಿಣ ಒಳನಾಡು ಜಿಲ್ಲೆಗಳು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಎಲ್ಲೆಲ್ಲಿ ಮಳೆಯಾಗಲಿದೆ ?
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಾಮರಾಜನಗರ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಮೈಸೂರು, ಹಾಸನ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಈ ಜಿಲ್ಲೆಗಳಲ್ಲಿ ಒಣಹವೆ ;
ಚಿತ್ರದುರ್ಗ, ದಾವಣಗೆರೆ, ತುಮಕೂರು, ವಿಜಯನಗರ, ವಿಜಯಪುರ, ಯಾದಗಿರಿ, ಕೊಪ್ಪಳ, ಕಲಬುರಗಿ, ಗದಗ, ಧಾರವಾಡ, ಹಾವೇರಿ, ಬೆಳಗಾವಿ, ಬೀದರ್, ಬಾಗಲಕೋಟೆ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





