Ripponpete

ಸ್ಟ್ಯಾನ್‌ಫೋರ್ಡ್ ವಿ.ವಿ. ಮತ್ತು ಎಲ್ಸ್ವಿಯರ್ ಸಂಸ್ಥೆಯ ವಿಶ್ವದ ಅತ್ಯುನ್ನತ ಪ್ರಭಾವಿ ವಿಜ್ಞಾನಿಗಳ ಪಟ್ಟಿಯಲ್ಲಿ ಸತತ 5ನೇ ಬಾರಿಗೆ ಡಾ. ಜೆ. ಜಿ. ಮಂಜುನಾಥ ಜಂಬಳ್ಳಿ !

RIPPONPETE ; ಯು.ಎಸ್.ಎ.ಯ ಸ್ಟ್ಯಾನ್‌ಫೋರ್ಡ್ ವಿ.ವಿ. ಮತ್ತು ಎಲ್ಸ್ವಿಯರ್ ಸಂಸ್ಥೆಯ ಸಹಯೋಗದೊಂದಿಗೆ ಪ್ರಕಟಿಸಿರುವ ವಿಶ್ವದ ಅತ್ಯುನ್ನತ 2% ವಿಜ್ಞಾನಿಗಳ ಪಟ್ಟಿಯಲ್ಲಿ ಡಾ. ಜೆ. ಜಿ. ಮಂಜುನಾಥರವರು ಸತತ ಐದನೇ ಬಾರಿ ಸ್ಥಾನ ಪಡೆದಿರುತ್ತಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಫೀಲ್ಡ್ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು, ಮಡಿಕೇರಿ ಇಲ್ಲಿನ ರಸಾಯನಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿರುವ ಡಾ. ಜೆ. ಜಿ. ಮಂಜುನಾಥರವರು “Analytical
Chemistry and Energy” ವಿಷಯಗಳಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಕಟಿಸಿರುವ ಸಂಶೋಧನಾ ಲೇಖನಗಳ ಆಧಾರದ ಮೇಲೆ ಇವರು 2024ರ ಸಾಲಿನ ಅತ್ಯುನ್ನತ ವಿಜ್ಞಾನಿಗಳ ಪಟ್ಟಿಯಲ್ಲಿ 8257ನೇ ಸ್ಥಾನವನ್ನು ಮತ್ತು ವಿಶ್ವದ ವೃತ್ತಿ ಜೀವಮಾನ ಸಾಧಕರ ಪಟ್ಟಿಯಲ್ಲಿ 65119ನೇ ಸ್ಥಾನವನ್ನು ಪಡೆದಿರುತ್ತಾರೆ. (ಸಂಯೋಜಿತ ಅಂಕಗಳ ಆಧಾರದ ಮೇಲೆ ಶ್ರೇಣಿ).

ಇವರು 194 ಅಂತರಾಷ್ಟ್ರೀಯ ಲೇಖನಗಳನ್ನು ಅತ್ಯಂತ ಪ್ರತಿಷ್ಟಿತ ಜರ್ನಲ್‌ಗಳಲ್ಲಿ ಪ್ರಕಟಿಸಿದ್ದು, 25 ಪುಸ್ತಕಗಳನ್ನು ಹೊರತಂದಿರುತ್ತಾರೆ. 27 ಜರ್ನಲ್‌ಗಳಲ್ಲಿ ಎಡಿಟೋರಿಯಲ್ ಬೋರ್ಡ್ಮೆಂಬರ್ ಆಗಿಯೂ ಹಾಗೂ Sensing technology (Taylor and
francis) ಜರ್ನಲ್‌ನ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿರುತ್ತಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಲೇಖನವನ್ನು ಮುಂದುವರಿಸಿ ಓದಿ

ಇವರು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಜಂಬಳ್ಳಿ ಗ್ರಾಮದ ಜೆ. ಶಾರದಮ್ಮ ಗಂಗಾಧರಪ್ಪ ಗೌಡರ ಪುತ್ರರಾಗಿರುತ್ತಾರೆ.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>