ಬಾಳೆಹೊನ್ನೂರು ; ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಜಗದ್ಗುರು ಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರ 35ನೇ ವರ್ಷದ ಪೀಠಾರೋಹಣ ವರ್ಧಂತಿ ಮಹೋತ್ಸವ ಧರ್ಮ ಸಮಾರಂಭ ಬೀದರ ಜಿಲ್ಲೆ ಭಾಲ್ಕಿ ತಾಲೂಕ ಮೇಹಕರ ಹಿರೇಮಠದಲ್ಲಿ ಜನವರಿ 21ರ ಬುಧವಾರ ಬೆಳಿಗ್ಗೆ 12.30 ಗಂಟೆಗೆ ಜರುಗುವುದೆಂದು ಶ್ರೀ ಜಗದ್ಗುರು ರಂಭಾಪುರಿ ಪೀಠದ ಪ್ರಕಟಣೆಯಲ್ಲಿ ತಿಳಿಸಿದೆ.
ಜನವರಿ 21ರಂದು ನಡೆಯುವ ಧರ್ಮ ಸಮಾರಂಭವನ್ನು ರಾಜ್ಯದ ಅರಣ್ಯ ಹಾಗೂ ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಬೀದರ ಸಂಸದ ಸಾಗರ ಖಂಡ್ರೆ, ಮಾಜಿ ಸಚಿವ ರಾಜಶೇಖರ ಪಾಟೀಲ, ಶಾಸಕರಾದ ಶರಣು ಸಲಗರ, ಡಾ.ಶೈಲೇಂದ್ರ ಬೆಲ್ದಾಳೆ ಭಾಗವಹಿಸುವರು. ಮೇಹಕರ ಹಿರೇಮಠದ ರಾಜೇಶ್ವರ ಶಿವಾಚಾರ್ಯ ಸ್ವಾಮಿಗಳು ನೇತೃತ್ವ ವಹಿಸುವರು.

ಬಿಚಗುಂದ ಸೋಮಲಿಂಗ ಶಿವಾಚಾರ್ಯರು, ಹುಡುಗಿ ವಿರೂಪಾಕ್ಷಲಿಂಗ ಶಿವಾಚಾರ್ಯರು, ಶ್ರೀನಿವಾಸ ಸರಡಗಿಯ ಡಾ.ರೇವಣಸಿದ್ಧೇಶ್ವರ ಶಿವಾಚಾರ್ಯರು, ಸ್ಟೇಷನ್ ಬಬಲಾದ ಶಿವಮೂರ್ತಿ ಶಿವಾಚಾರ್ಯರು, ಹಲಬುರ್ಗಾದ ಹಾವಗಿ ಲಿಂಗೇಶ್ವರ ಶಿವಾಚಾರ್ಯರು, ಮಾದನ ಹಿಪ್ಪರಗಿ ಶಾಂತವೀರ ಶಿವಾಚಾರ್ಯರು, ಸಿದ್ಧರಬೆಟ್ಟದ ವೀರಭದ್ರ ಶಿವಾಚಾರ್ಯರು, ಆಲಮೇಲ ಚಂದ್ರಶೇಖರ ಶಿವಾಚಾರ್ಯರು, ಮಳಲಿಮಠದ ಡಾ.ನಾಗಭೂಷಣ ಶಿವಾಚಾರ್ಯರು, ಕನ್ನೂರು-ಸಿಂಧನೂರು ಸೋಮನಾಥ ಶಿವಾಚಾರ್ಯರು, ತ್ರಿಪುರಾಂತಕ ಗವಿಮಠದ ಡಾ.ಅಭಿನವ ಘನಲಿಂಗ ರುದ್ರಮುನಿ ಶಿವಾಚಾರ್ಯರು ಸಮ್ಮುಖ ವಹಿಸುವರು. ನಾಡಿನ ಮಠಾಧೀಶರು ಪಾಲ್ಗೊಳ್ಳುವರು.
ಬಿ.ಎಸ್.ಕುದುರೆ, ಗಣಪತರಾವ್ ಖೂಬಾ, ಶಿವಶರಣಪ್ಪ ವಾಲಿ, ಅಲ್ಲಾಡಿ ವೀರೇಶಂ, ಶಿವಶರಣಪ್ಪ ಸಿರಿ ಉಪಸ್ಥಿತರಿರುವರು.

ಜನವರಿ 21ರ ಬೆಳಿಗ್ಗೆ ಶ್ರೀ ರಂಭಾಪುರಿ ಜಗದ್ಗುರುಗಳವರ ಅಡ್ಡಪಲ್ಲಕ್ಕಿ ಮಹೋತ್ಸವ ಸಕಲ ಬಿರುದಾವಳಿಗಳೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ನಡೆಯುವುದು. ಈ ಸಮಾರಂಭದ ಅಂಗವಾಗಿ ಜನೆವರಿ 19ರಿಂದ 21ರ ವರೆಗೆ ಶ್ರೀ ರಂಭಾಪುರಿ ಜಗದ್ಗುರುಗಳವರ ಇಷ್ಟಲಿಂಗ ಮಹಾಪೂಜಾ ಮೇಹಕರ ಹಿರೇಮಠದ ರಾಜೇಶ್ವರ ಶಿವಾಚಾರ್ಯ ಸ್ವಾಮಿಗಳ ನೇತೃತ್ವದಲ್ಲಿ ಪ್ರತಿ ದಿನ ಬೆಳಿಗ್ಗೆ 8.30ಗಂಟೆಗೆ ಜರುಗಲಿದೆ.
ಈ ಸಮಾರಂಭದಲ್ಲಿ ಸಮಸ್ತ ಭಕ್ತ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ವಿನಂತಿಸಲಾಗಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





