ರಿಪ್ಪನ್‌ಪೇಟೆ ; ಇಲ್ಲಿನ ಶಿವಮೊಗ್ಗ ರಸ್ತೆಯಲ್ಲಿರುವ ಶಿವಮಂದಿರದ ಸಮುದಾಯ ಭವನದಲ್ಲಿ ಜನವರಿ 22 ರ ಬುಧವಾರ ಬೆಳಗ್ಗೆ 11 ಗಂಟೆಗೆ ಬಾಳೆಹೊನ್ನೂರು ರಂಭಾಪುರಿ ಪೀಠದ 1008 ಜಗದ್ಗುರು ಪ್ರಸನ್ನ ರೇಣುಕಾ ಡಾ. ವೀರಸೋಮೇಶ್ವ ರಾಜದೇಶಿ ಕೇಂದ್ರ ಶಿವಾಚಾರ್ಯ ಭಗವತ್ಪಾದರು ದಿವ್ಯ ಸಾನಿಧ್ಯದಲ್ಲಿ ಜನಜಾಗೃತಿ ಧರ್ಮ ಸಮಾರಂಭವನ್ನು ಆಯೋಜಿಸಲಾಗಿದೆ ಎಂದು ಶಿವಮಂದಿರದ ಕಾರ್ಯದರ್ಶಿ ಡಿ.ಎಸ್.ರಾಜಾಶಂಕರ ತಿಳಿಸಿದರು.
ಸಮಾರಂಭದ ಅಧ್ಯಕ್ಷತೆಯನ್ನು ಶ್ರೀಬಸವೇಶ್ವರ ವೀರಶೈವ ಸಮಾಜದ ಅಧ್ಯಕ್ಷ ಡಾ.ಕೆ.ಬಿ. ಕಮಲಾಕ್ಷರಪ್ಪ ವಹಿಸುವರು. ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಶಾಸಕರಾದ ಗೋಪಾಲಕೃಷ್ಣ ಬೇಳೂರು, ಡಾ.ಧನಂಜಯ ಸರ್ಜಿ, ಎಂ.ಎ.ಡಿ.ಬಿ. ಅಧ್ಯಕ್ಷ ಮಂಜುನಾಥಗೌಡ, ಮಾಜಿ ಸಚಿವ ಹರತಾಳು ಹಾಲಪ್ಪ, ಮಾಜಿ ಎಂ.ಎಲ್.ಸಿ.ರುದ್ರೇಗೌಡ, ಗ್ರಾಮ ಪಂಚಾಯತಿ ಅಧ್ಯಕ್ಷೆ ಧನಲಕ್ಷ್ಮಿ ಬಸವೇಶ್ವರ ವೀರಶೈವ ಸಮಾಜದ ಉಪಾಧ್ಯಕ್ಷರಾದ ಜಿ.ಎಂ.ದುಂಡರಾಜಗೌಡ, ಎಂ.ಆರ್.ಶಾಂತವೀರಪ್ಪಗೌಡ, ಅಖಿಲ ಭಾರತ ವೀರಶೈವ ಮಹಾಸಭೆಯ ತಾಲ್ಲೂಕು ಅಧ್ಯಕ್ಷ ಎಂ.ಎಸ್.ಉಮೇಶ್ ಭಾಗವಹಿಸುವರು. ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಶಿವಮಂದಿರದ ಕಾರ್ಯದರ್ಶಿ ಡಿ.ಎಸ್.ರಾಜಾಶಂಕರ್ ಕೋರಿದ್ದಾರೆ.