Ripponpete

ಜ.22 ರಂದು ರಿಪ್ಪನ್‌ಪೇಟೆ ಶಿವಮಂದಿರದಲ್ಲಿ ರಂಭಾಪುರಿ ಜಗದ್ಗುರುಗಳಿಂದ ಜನಜಾಗೃತಿ ಧರ್ಮ ಸಮಾರಂಭ

ರಿಪ್ಪನ್‌ಪೇಟೆ ; ಇಲ್ಲಿನ ಶಿವಮೊಗ್ಗ ರಸ್ತೆಯಲ್ಲಿರುವ ಶಿವಮಂದಿರದ ಸಮುದಾಯ ಭವನದಲ್ಲಿ ಜನವರಿ 22 ರ ಬುಧವಾರ ಬೆಳಗ್ಗೆ 11 ಗಂಟೆಗೆ ಬಾಳೆಹೊನ್ನೂರು ರಂಭಾಪುರಿ ಪೀಠದ 1008 ಜಗದ್ಗುರು ಪ್ರಸನ್ನ ರೇಣುಕಾ ಡಾ. ವೀರಸೋಮೇಶ್ವ ರಾಜದೇಶಿ ಕೇಂದ್ರ ಶಿವಾಚಾರ್ಯ ಭಗವತ್ಪಾದರು ದಿವ್ಯ ಸಾನಿಧ್ಯದಲ್ಲಿ ಜನಜಾಗೃತಿ ಧರ್ಮ ಸಮಾರಂಭವನ್ನು ಆಯೋಜಿಸಲಾಗಿದೆ ಎಂದು ಶಿವಮಂದಿರದ ಕಾರ್ಯದರ್ಶಿ ಡಿ.ಎಸ್.ರಾಜಾಶಂಕರ ತಿಳಿಸಿದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಸಮಾರಂಭದ ಅಧ್ಯಕ್ಷತೆಯನ್ನು ಶ್ರೀಬಸವೇಶ್ವರ ವೀರಶೈವ ಸಮಾಜದ ಅಧ್ಯಕ್ಷ ಡಾ.ಕೆ.ಬಿ. ಕಮಲಾಕ್ಷರಪ್ಪ ವಹಿಸುವರು. ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಶಾಸಕರಾದ ಗೋಪಾಲಕೃಷ್ಣ ಬೇಳೂರು, ಡಾ.ಧನಂಜಯ ಸರ್ಜಿ, ಎಂ.ಎ.ಡಿ.ಬಿ. ಅಧ್ಯಕ್ಷ ಮಂಜುನಾಥಗೌಡ, ಮಾಜಿ ಸಚಿವ ಹರತಾಳು ಹಾಲಪ್ಪ, ಮಾಜಿ ಎಂ.ಎಲ್.ಸಿ.ರುದ್ರೇಗೌಡ, ಗ್ರಾಮ ಪಂಚಾಯತಿ ಅಧ್ಯಕ್ಷೆ ಧನಲಕ್ಷ್ಮಿ ಬಸವೇಶ್ವರ ವೀರಶೈವ ಸಮಾಜದ ಉಪಾಧ್ಯಕ್ಷರಾದ ಜಿ.ಎಂ.ದುಂಡರಾಜಗೌಡ, ಎಂ.ಆರ್.ಶಾಂತವೀರಪ್ಪಗೌಡ, ಅಖಿಲ ಭಾರತ ವೀರಶೈವ ಮಹಾಸಭೆಯ ತಾಲ್ಲೂಕು ಅಧ್ಯಕ್ಷ ಎಂ.ಎಸ್.ಉಮೇಶ್ ಭಾಗವಹಿಸುವರು. ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಶಿವಮಂದಿರದ ಕಾರ್ಯದರ್ಶಿ ಡಿ.ಎಸ್.ರಾಜಾಶಂಕರ್ ಕೋರಿದ್ದಾರೆ.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>