ಶಿವಮೊಗ್ಗ ; ನಾಗರೀಕರ ಅಹವಾಲುಗಳನ್ನು ಆಲಿಸಿ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಇವರ ನೇತೃತ್ವದಲ್ಲಿ ಏ.21 ರಂದು ಹೊಸನಗರದ ಈಡಿಗರ ಸಭಾ ಭವನದಲ್ಲಿ ಬೆಳಿಗ್ಗೆ 9.30 ರಿಂದ ಜಿಲ್ಲಾ ಮಟ್ಟದ ‘ಜನಸ್ಪಂದನ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ಚುನಾಯಿತ ಪ್ರತಿನಿಧಿಗಳು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಸಂಬಂಧಿಸಿದ ಅಧಿಕಾರಿಗಳು ಹಾಜರಿರುವುದರಿಂದ ಜಿಲ್ಲೆಯ ಎಲ್ಲಾ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಬಹುದು.
ವೈಯಕ್ತಿಕ ಅಹವಾಲು ಸಲ್ಲಿಸುವವರು ತಮ್ಮ ಅಹವಾಲನ್ನು ತಾವೊಬ್ಬರೇ ಸಲ್ಲಿಸಬಹುದಾಗಿದೆ. ಸಾರ್ವಜನಿಕವಾಗಿ ಅಹವಾಲು ಸಲ್ಲಿಸುವವರು ಗರಿಷ್ಟ ಇಬ್ಬರಿಗೆ ಅವಕಾಶವನ್ನು ನೀಡಲಾಗುವುದು ಹಾಗೂ ಅರ್ಜಿ ನೋಂದಾಯಿಸಿದ ನಂತರ ಟೋಕನ್‌ಗಳನ್ನು ಪಡೆಯತಕ್ಕದ್ದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.
ನಾಗದೇವರಿಗೆ ಕಲಾತತ್ವ ಹೋಮ ; ಸಾರ್ವಜನಿಕ ಅನ್ನಸಂತರ್ಪಣೆ
ಹೊಸನಗರ ; ಪಟ್ಟಣದ ಕ್ರಿಶ್ಚಿಯನ್ ಕಾಲೋನಿಯಲ್ಲಿ ಎನ್ ಯೋಗೇಂದ್ರ ಮತ್ತು ಶೈಲಾ ಕುಟುಂಬದವರು ಸಾರ್ವಜನಿಕ ಸೇವೆಗಾಗಿ ಸ್ತಾಪಿತವಾಗಿರುವ ನಾಗ, ನಾಗಯಕ್ಷಿ ದೇವರಿಗೆ ಏ. 19ರ ಶನಿವಾರ ವರ್ಧತ್ಯುತ್ಸವದ ಅಂಗವಾಗಿ ಕಲಾತತ್ವ ಹೋಮ, ಕಲಾಭಿಷೇಕ, ಪಂಚಾಮೃತ ಪೂಜೆ ಹಾಗೂ ಸತ್ಯನಾರಾಯಣ ವ್ರತ ಪೂಜೆ ಕಾರ್ಯಕ್ರಮ ನಂತರ 1 ಗಂಟೆಗೆ ಸಾರ್ವಜನಿಕ ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು ಸಾರ್ವಜನಿಕರು ಹಾಗೂ ದೇವರ ಭಕ್ತಾರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಅನ್ನ ಪ್ರಸಾದವನ್ನು ಸ್ವೀಕರಿಸಬೇಕಾಗಿ ಎನ್ ಯೋಗೇಂದ್ರ ಕುಟುಂಬದವರು ಈ ಮೂಲಕ ಕೇಳಿಕೊಂಡಿದ್ದಾರೆ.