ಹೊಸನಗರ ; ತಾಲೂಕಿನ ಮೇಲಿನಬೆಸಿಗೆ ಗ್ರಾಮ ಪಂಚಾಯಿತಿಯ ಜಯನಗರ ವಾಸಿ ರಾಮಚಂದ್ರರಾವ್ ರವರ ಪತ್ನಿ ಸೀತಮ್ಮ (86) ಇಂದು ಬೆಳಗ್ಗೆ 7:00 ಗಂಟೆಗೆ ಇಹಲೋಕ ತ್ಯಜಿಸಿದ್ದಾರೆ.
ಮೃತರು ಹೊಸನಗರ ಸಾರ್ವಜನಿಕ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಅಧ್ಯಕ್ಷ ಕೆ.ಆರ್ ಗೋಪಿನಾಥ್ ಹಾಗೂ ಜಯನಗರ ಚಾಮುಂಡೇಶ್ವರಿ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಕೆ.ಆರ್ ವಿಶ್ವನಾಥ್ ಹಾಗೂ ಇಬ್ಬರು ಪುತ್ರಿಯರು ಅಪಾರ ಬಂಧು – ಬಳಗವನ್ನು ಅಗಲಿದ್ದಾರೆ.
ಸೀತಮ್ಮನವರ ನಿಧನಕ್ಕೆ ಸಾಗರ, ಹೊಸನಗರ ಕ್ಷೇತ್ರದ ಶಾಸಕ, ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಬೇಳೂರು ಗೋಪಾಲಕೃಷ್ಣ ಹಾಗೂ ಅವರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು, ಜಿಲ್ಲಾ ಬಿಜೆಪಿ ಮುಖಂಡ ಎನ್.ಆರ್ ದೇವಾನಂದ್, ಜಿಲ್ಲಾ ಕಾಂಗ್ರೆಸ್ ಸಮಿತಿಯ ಬಿ.ಆರ್ ಪ್ರಭಾಕರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.