ಹೊಸನಗರ ; ಚಾಲಕನ ನಿಯಂತ್ರಣ ತಪ್ಪಿ ಕೊಲ್ಲೂರಿನಿಂದ ಕೊಡಚಾದ್ರಿಗೆ ಹೋಗುತ್ತಿದ್ದ ಜೀಪ್ ಪಲ್ಟಿಯಾದ ಘಟನೆ ಇೃದು ನಿಟ್ಟೂರು – ಕಟ್ಟಿನಹೊಳೆ ಮಾರ್ಗದ ಕುಂಬಳೆ ಗ್ರಾಮದ ಬಳಿ ನಡೆದಿದೆ.
ಜೀಪ್‌ನಲ್ಲಿ ಕೇರಳ ಮೂಲದ 8 ಜನ ಭಕ್ತರಿದ್ದು, ಅವರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ.

ಹೊಸನಗರ ತಾಲೂಕಿನ ಕೊಡಚಾದ್ರಿ ಬೆಟ್ಟಕ್ಕೆ ಭಕ್ತರು ಕೊಲ್ಲೂರಿನಿಂದ ಜೀಪ್‌ನಲ್ಲಿ ಹೊರಟಿದ್ದರು. ಚಾಲಕನ ಅತಿ ವೇಗದ ಹಿನ್ನೆಲೆಯಲ್ಲಿ ನಿಯಂತ್ರಣ ತಪ್ಪಿದ ಜೀಪ್ ಪಲ್ಟಿಯಾಗಿದೆ ಎನ್ನಲಾಗಿದೆ.
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
ಲೇಖನವನ್ನು ಮುಂದುವರಿಸಿ ಓದಿ
ಪಲ್ಟಿಯಾದ ಜೀಪ್ ಭಾಗಶಃ ಜಖಂ ಆಗಿದ್ದು, ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

