ಶರಾವತಿ ಮುಳುಗಡೆ ಸಂತ್ರಸ್ಥರ ಪುನರ್ವಸತಿಗೆ ಜಂಟಿ ಸ್ಥಳ ಪರಿಶೀಲನೆ : ತಹಸೀಲ್ದಾರ್ ರಶ್ಮಿ ಹಾಲೇಶ್

Written by malnadtimes.com

Published on:

ಹೊಸನಗರ : ಶರಾವತಿ ಮುಳುಗಡೆ ಸಂತ್ರಸ್ತರ ಪುನರ್ವಸತಿಗೆ ಅರಣ್ಯ ಜಮೀನು ಡಿ ರಿಸರ್ವ್ ಮಾಡುವ ಸಂಬಂಧ ಜಂಟಿ ಸ್ಥಳ ಪರಿಶೀಲನೆಗೆ ಕಂದಾಯ, ಅರಣ್ಯ ಇಲಾಖೆ ಸಿಬ್ಬಂದಿಗಳ ತಂಡ ನಿಮ್ಮ ಗ್ರಾಮಕ್ಕೆ ಬರಲಿದ್ದು ಅವರಿಗೆ ಅಗತ್ಯ ದಾಖಲೆಗಳನ್ನು ಒದಾಗಿಸುವಂತೆ ಹೊಸನಗರದ ತಹಸೀಲ್ದಾರ್ ರಶ್ಮಿ ಹಾಲೇಶ್‌ ಆಯಾಯ ಗ್ರಾಮದ ಗ್ರಾಮಸ್ಥರಿಗೆ ಮನವಿ ಮಾಡಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಶರಾವತಿ ಮುಳುಗಡೆ ಸಂತ್ರಸ್ಥರ ಪುನರ್ವಸತಿಗೆಂದು ಅರಣ್ಯ ಜಮೀನು ಬಿಡುಗಡೆಗಾಗಿ ಕೇಂದ್ರ ಸರ್ಕಾರ ಹಾಗೂ ಸುಪ್ರಿಂಕೋರ್ಟ್ ಜಿಲ್ಲೆಯಲ್ಲಿ ಜಂಟಿ ತನಿಖೆ ಮತ್ತು ಸಮೀಕ್ಷೆ ನಡೆಸಿ ವರದಿ ನೀಡುವಂತೆ ಸೂಚಿಸಿರುವುದರಿಂದ ಈ ವೇಳೆ ಪ್ರಸ್ತಾವನೆಯಲ್ಲಿನ ದಾಖಲೆ ಸ್ಕೆಚ್ ಜಿ.ಪಿ.ಎಸ್ ದತ್ತಾಂಶಗಳನ್ನು ಆಧರಿಸಿ ಪ್ರಸ್ತಾಪಿತ ಬೊಲಾಕ್ ಹಾಗೂ ಸ.ನಂ.ನಲ್ಲಿರುವ ಬ್ಲಾಕ್ ಗಡಿ ಹಾಗೂ ವಿಸ್ತೀರ್ಣವನ್ನು ಭೂಮಾಪಕರು ನೊಂದಣಿ ಮಾಡಿ ದತ್ತಾಂಶ ಸಂಗ್ರಹಿಸಲಿದ್ದಾರೆ. ಭೂ ಅನುಭೋಗದಾರ ಸ್ಥಳದಲ್ಲಿದ್ದು ತಮ್ಮ ಜಮೀನಿನ ವಿಸ್ತೀರ್ಣವನ್ನು ನೊಂದಣಿ ಮಾಡಿಕೊಂಡು ಡಿಜಿಪಿಎಸ್ ದತ್ತಾಂಶ ಹಾಗೂ ವಿಸೀರ್ಣದ ವಿವರಗಳನ್ನು ಸಂಗ್ರಹಿಸಿಕೊಂಡು ನಿಯಮಾನುಸಾರ ಕ್ರಮ ವಹಿಸಲಿದ್ದಾರೆ. ಅರಣ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿಗಳು ನಿಮ್ಮ ಗ್ರಾಮಕ್ಕೆ ಬರುವಾಗ ತಿಳಿಸಲಾಗುವುದು ನೀವು ನಮ್ಮ ಭೂದಾಖಲೆಗಳನ್ನು ಇಟ್ಟುಕೊಂಡು ಅಧಿಕಾರಿಗಳೊಂದಿಗೆ ಸಹಕರಿಸಬೇಕೆಂದು ಈ ಮೂಲಕ ಕೇಳಿಕೊಂಡರು.

ಈ ಸಂದರ್ಭದಲ್ಲಿ ಶಿರಸ್ತೇದಾರ್ ಮಂಜುನಾಥ್ ಕಟ್ಟೆ, ಪ್ರಥಮ ದರ್ಜೆ ಗುಮಾಸ್ಥರಾದ ಚಿರಾಗ್, ರೆವಿನ್ಯು ಇನ್ಸ್ಪೇಕ್ಟರ್ ಆಂಜನೇಯ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

Leave a Comment