ಹೊಸನಗರ

ಪತ್ರಕರ್ತ ರವಿ ಬಿದನೂರಿಗೆ ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ ಪ್ರದಾನ

ಹೊಸನಗರ ; ಜನವರಿ 18-19 ರಂದು ತುಮಕೂರಿನಲ್ಲಿ ನಡೆದ 39ನೇ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ರಾಜ್ಯಮಟ್ಟದ ಸಮ್ಮೇಳನದಲ್ಲಿ ಗ್ರಾಮೀಣ ಭಾಗದ ಜನಪರ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಅತ್ಯುತ್ತಮ ವರದಿಗಾಗಿ ತಾಲೂಕಿನ ಹಿರಿಯ ಪತ್ರಕರ್ತ ರವಿ ಬಿದನೂರು ಅವರಿಗೆ ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

WhatsApp Group Join Now
Telegram Group Join Now
Instagram Group Join Now

ಪ್ರಶಸ್ತಿಗೆ ಭಾಜನರಾದ ರವಿ ಬಿದನೂರು ಅವರ‌‌ ಸಾಧನೆಗೆ ಸಂಸದ ಬಿ.ವೈ. ರಾಘವೇಂದ್ರ, ಮಾಜಿ ಸಚಿವ ಹರತಾಳು ಹಾಲಪ್ಪ, ಆರಗ ಜ್ಞಾನೇಂದ್ರ, ಶಾಸಕ ಗೋಪಾಲಕೃಷ್ಣ ಬೇಳೂರು, ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಡಾ. ಆರ್.ಎಂ. ಮಂಜುನಾಥ ಗೌಡ, ಶಿಮುಲ್ ಅಧ್ಯಕ್ಷ ಗುರುಶಕ್ತಿ ವಿದ್ಯಾಧರ್ ಸೇರಿದಂತೆ ಹಲವು ಸಂಘ-ಸಂಸ್ಥೆಗಳು ಪ್ರಶಂಸೆ ವ್ಯಕ್ತಪಡಿಸಿವೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]