ಹೊಸನಗರ ; ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಂಚಿಕೊಂಡ ಆರೋಪದಡಿ, ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರರ ಹೊಸನಗರ ಭಾಗದ ಸಹಾಯಕನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಇಲ್ಲಿನ ಜೆ.ಎಂ.ಎಫ್.ಸಿ (JMFC) ನ್ಯಾಯಾಲಯ ಆದೇಶ ಹೊರಡಿಸಿದೆ.
ಮಳಲಿ ಗ್ರಾಮದ ನಿವಾಸಿ, ಶಾಸಕ ಆರಗ ಜ್ಞಾನೇಂದ್ರರ ಸಹಾಯಕ ರಾಜೇಶ್ ಹಿರಿಮನೆ ಬಂಧಿತ ಆರೋಪಿ. ಈತ ರಾಹುಲ್ ಗಾಂಧಿಯವರ ಮುಖದ ಅರ್ಧ ಭಾಗ ಹಾಗೂ ಪಾಕಿಸ್ತಾನ ಸೇನೆಯ ಸಮವಸ್ತ್ರ ಧರಿಸಿದ ಅಧಿಕಾರಿ ‘ಅಸಿಮ್’ (ASIM) ಎಂಬುವರ ಫೋಟೋವನ್ನು ಎಡಿಟ್ ಮಾಡಿ ಸೇರಿಸಿದ್ದರು. ಈ ಚಿತ್ರಕ್ಕೆ “ONE AGENDA” ಎಂಬ ಟ್ಯಾಗ್ ಲೈನ್ ನೀಡಿ, ತನ್ನ ಫೇಸ್ಬುಕ್ನಲ್ಲಿ ಹರಿಬಿಟ್ಟಿದ್ದ.

ಈ ಕೃತ್ಯದ ಕುರಿತಂತೆ 2025ರ ಮೇ 20 ರಂದು ನಗರ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ (BNS) ಕಾಯ್ದೆಯ ಸೆಕ್ಷನ್ 353(2) ರ ಅಡಿಯಲ್ಲಿ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದರು.
ನ್ಯಾಯಾಂಗ ಬಂಧನ ;
ಇಂದು ಪ್ರಕರಣದ ವಿಚಾರಣೆ ನಡೆಸಿದ ಇಲ್ಲಿನ ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರು ಆರೋಪಿ ರಾಜೇಶ್ ಹಿರಿಮನೆ ಅವರನ್ನು ಫೆ. 24 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿ ಆದೇಶ ನೀಡಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





