Hosanagara

ಹೊಸನಗರ ತಾಲೂಕು ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಅಧ್ಯಕ್ಷರಾಗಿ ಕೆ.ಜಿ.ಪುಟ್ಟಸ್ವಾಮಿ ಅವಿರೋಧ ಆಯ್ಕೆ

ಹೊಸನಗರ : ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಜೇನಿ‌ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಕೆ.ಜಿ.ಪುಟ್ಟಸ್ವಾಮಿ ಅವಿರೋಧ ಆಯ್ಕೆಯಾಗಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಇತ್ತೀಚೆಗೆ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಸ್ಥಾನಕ್ಕೆ ಚುನಾವಣೆ ನಡೆದಿತ್ತು. ಹೊಸನಗರ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಉಪಾಧ್ಯಕ್ಷರಾಗಿ ಗುಳ್ಳೆಕೊಪ್ಪ ಕಿರಿಯ ಪ್ರಾಥಮಿಕ ಶಾಲೆ ಶಿಕ್ಷಕಿ ಆರ್. ಮಂಜುಳಾ (ಸಾಮಾನ್ಯ ಕ್ಷೇತ್ರ) ಹಾಗೂ ರಿಪ್ಪನ್‌ಪೇಟೆಯ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಹೆಚ್.ನೀಲಾವತಿ (ಮಹಿಳಾ ಮೀಸಲು ಕ್ಷೇತ್ರ), ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಹೊರಬೈಲು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಹೆಚ್.ಸಿ.ಶಿವಪ್ಪ (ಸಾಮಾನ್ಯ ಕ್ಷೇತ್ರ), ಸಹ ಕಾರ್ಯದರ್ಶಿಯಾಗಿ ಹೊಸನಗರ ಪಿಎಂಶ್ರೀ ಶಾಲೆಯ ಶಿಕ್ಷಕಿ ಗಾಯತ್ರಿ ಎನ್ ಪಟಗಾರ್ (ಮಹಿಳಾ ಮೀಸಲಾತಿ ಕ್ಷೇತ್ರ) ಹಾಗೂ ಖಜಾಂಚಿ ಸ್ಥಾನಕ್ಕೆ‌ ಅಮೃತ ಕೆಪಿಎಸ್ ಶಾಲೆಯ ಶಿಕ್ಷಕ ಎಂ.ಎಂ.ಈಶ್ವರಪ್ಪ (ಸಾಮಾನ್ಯ ಕ್ಷೇತ್ರ) ಅವರು ಮುಂದಿನ 2026 ರಿಂದ 2031ರ ಅವಧಿಗೆ ತಾಲೂಕು ಸಂಘದ ಪದಾಧಿಕಾರಿಗಳಾಗಿ ಅವಿರೋಧ ಆಯ್ಕೆ ಆಗಿದ್ದಾರೆ ಎಂದು ಚುನಾವಣಾಧಿಕಾರಿ ಸುಬ್ರಹ್ಮಣ್ಯ ಹೆಚ್.ಎಂ. ಘೋಷಣೆ ಮಾಡಿದ್ದಾರೆ.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>