ಹೊಸನಗರ ; ಮಕ್ಕಳ ದಿನಾಚರಣೆ ಪ್ರಯುಕ್ತ ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್ ಆಯೋಜಿಸಿದ್ದ ಶಿವಮೊಗ್ಗ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ 2025 ರಲ್ಲಿ ಹೊಸನಗರ ತಾಲೂಕಿನ ಗೇರುಪುರ ಗ್ರಾಮದ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ (ಎಸ್.ಸಿ. -273) 10ನೇ ತರಗತಿ ವಿದ್ಯಾರ್ಥಿ ಚೇತನ್ ಕೆ.ಎಸ್. ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ತಾಲೂಕಿಗೆ ಕೀರ್ತಿ ತಂದಿದ್ದಾನೆ.

ಈತನ ಸಾಧನೆಗೆ ಶಿಕ್ಷಣ ಇಲಾಖೆ ಹಾಗೂ ವಸತಿ ಶಾಲೆಯ ಎಲ್ಲಾ ಸಿಬ್ಬಂದಿ ವರ್ಗ ಸೇರಿದಂತೆ ಶಾಲೆಯ ಪ್ರಾಂಶುಪಾಲ ಚಂದ್ರಶೇಖರ್ ಎಂ.ಪಿ. ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





