KALASA | ಕಾಫಿನಾಡಿನಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು ಹಳ್ಳ-ಕೊಳ್ಳಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಈ ನಡುವೆ ಎಮ್ಮೆಯೊಂದು ಹಳ್ಳ ದಾಟಲು ಹೋಗಿ ವ್ಯಕ್ತಿಯೊಬ್ಬರ ಕಣ್ಣೆದುರೇ ನೀರುಪಾಲಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಮಾವಿನಹೊಲದಲ್ಲಿ ಶನಿವಾರ ನಡೆದಿದೆ.
SAGARA :ಶಂಕಿತ ಡೆಂಘೀಗೆ 06 ವರ್ಷದ ಬಾಲಕ ಬಲಿ !
ಭಾರಿ ಮಳೆಯಿಂದ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಈ ನಡುವೆ ಇಲ್ಲೋರ್ವ ವ್ಯಕ್ತಿ ತನ್ನ ಮೊಬೈಲ್ ನಿಂದ ಉಕ್ಕಿ ಹರಿಯುತ್ತಿರುವ ನದಿಯ ವಿಡಿಯೋ ಮಾಡುತ್ತಿರುವ ವೇಳೆ ಎಮ್ಮೆಯೊಂದು ಹಳ್ಳ ದಾಟಲು ಯತ್ನಿಸಿದೆ. ಈ ವೇಳೆ ಅಲ್ಲಿದ್ದ ವ್ಯಕ್ತಿ ಎಮ್ಮೆಯನ್ನು ಹಳ್ಳ ದಾಟದಂತೆ ತಡೆಯಲು ಯತ್ನಿಸಬಹುದಿತ್ತು ಆದರೆ ಆತ ವಿಡಿಯೋ ಮಾಡುವುದರಲ್ಲೇ ಬ್ಯುಸಿಯಾಗಿದ್ದ ಅತ್ತ ಎಮ್ಮೆ ಹಳ್ಳ ದಾಟಲು ಹೋಗಿ ನೀರಿನ ರಭಸಕ್ಕೆ ವ್ಯಕ್ತಿಯ ಕಣ್ಣೆದುರೇ ನೀರುಪಾಲಾಗಿದೆ. ಈ ದೃಶ್ಯ ಆತನ ಮೊಬೈಲ್ ನಲ್ಲಿ ಸೆರೆಯಾಗಿದೆ.

ಒಂದು ವೇಳೆ ವಿಡಿಯೋ ಮಾಡುತ್ತಿದ್ದ ವ್ಯಕ್ತಿ ಸಮಯ ಪ್ರಜ್ಞೆ ಮೆರೆದಿದ್ದರೆ ಎಮ್ಮೆಯ ಜೀವ ಉಳಿಸಬಹುದಿತ್ತು.
ಜನಪ್ರತಿನಿಧಿಗಳ ನಿರ್ಲಕ್ಷ್ಯ, ಈ ಗ್ರಾಮಸ್ಥರ ಸಮಸ್ಯೆಗೆ ಮುಕ್ತಿಯೆಂದು ?

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.