ಹೊಸನಗರ ; ಹೊಸನಗರ ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ನಿರ್ವಹಿಸುತ್ತಿದ್ದ ಕಾಲಸಸಿ ಸತೀಶ್ ಬಿಜೆಪಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಶಾಸಕ ಬೇಳೂರು ಗೋಪಾಲಕೃಷ್ಣರ ನಿವಾಸದಲ್ಲಿ ಕಾಂಗ್ರೆಸ್ಗೆ ಅಧಿಕೃತವಾಗಿ ತಮ್ಮ ಬೆಂಬಲಿಗರೊಂದಿಗೆ ಸೇರ್ಪಡೆಯಾದರು.
ಸುಮಾರು ಒಂದೂವರೆ ವರ್ಷದಿಂದ ಬಿಜೆಪಿ ಪಕ್ಷದಿಂದ ದೂರವಿದ್ದು ಬಿಜೆಪಿ ಪಕ್ಷದ ಸಿದ್ಧಾಂತಗಳು ಹಿಡಿಸದೇ ಇದ್ದದ್ದರಿಂದ ನಾನು ಬಿಜೆಪಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ. ಬಿಜೆಪಿ ಪಕ್ಷ ನನಗೆ ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯಿತಿ ಚುನಾವಣೆ ಸಂದರ್ಭದಲ್ಲಿ ಹಾಗೂ ನಾನು ಅಧ್ಯಕ್ಷರಾಗಿ ಆಯ್ಕೆಯಾಗುವ ಸಂದರ್ಭದಲ್ಲಿ ನನ್ನ ಜೊತೆಗಿದ್ದು ಕೆಲಸ ಮಾಡಿದೆ ಎಂದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





