ಕಾಲುಸಂಕ ದಾಟುವಾಗ ನೀರಿನಲ್ಲಿ ಕೊಚ್ಚಿ ಹೋಗಿ ಮಹಿಳೆ ಸಾವು !

Written by malnadtimes.com

Published on:

HOSANAGARA | ಕಾಲುಸಂಕ ದಾಟುವಾಗ ನೀರಿನಲ್ಲಿ ಕೊಚ್ಚಿ ಹೋಗಿ ಮಹಿಳೆ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಹೊಸನಗರ ತಾಲೂಕಿನ ಬೈಸೆ ಎಂಬಲ್ಲಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಬೈಸೆ ಗ್ರಾಮದ ಚೀಕಳಿ ನಿವಾಸಿ ಶಶಿಕಲಾ (43) ಮೃತ ಮಹಿಳೆ. ಕಳೆದ ಮೂರ್ನಾಲ್ಕು ದಿನಗಳಿಂದ ಈ ಭಾಗದಲ್ಲಿ ಧಾರಾಕಾರವಾಗಿ ಮಳೆಯಾಗುತ್ತಿದ್ದು, ಜಮೀನಿನ ಬಳಿ ಸಂಕ ದಾಟಲು ಹೋದಾಗ ಈ ಘಟನೆ ನಡೆದಿದೆ.

ಹೇಗಾಯ್ತು ಘಟನೆ ?

ಮೃತ ಮಹಿಳೆ ಶಶಿಕಲಾ ಬೆಳಿಗ್ಗೆ ಅಗೆ ಹಾಕಲು (ಸಸಿಮಡಿ) ನೋಡಿಕೊಂಡು ಬರಲು ಜಮೀನಿಗೆ ಹೋಗಿದ್ದು ವಾಪಾಸ್ ಬಂದಿರಲಿಲ್ಲ. ಕೆಲಹೊತ್ತು ಬಿಟ್ಟು ಮನೆಯವರು ಹುಡುಕಲು ಹೋದ ಸಂದರ್ಭದಲ್ಲಿ ಜಮೀನಿನ ಹತ್ತಿರದ ಸಂಕದಿಂದ ಒಂದು ಕಿ.ಮೀ. ದೂರದ ದುಮುಕದಗದ್ದೆ ಕಾಲು ಸೇತುವೆ ಹತ್ತಿರ ಹಳ್ಳದಲ್ಲಿ ಮೃತದೇಹವೊಂದು ಮರಕ್ಕೆ ಸಿಕ್ಕಿಹಾಕಿರುವುದು ಕಂಡು ಬಂದಿದೆ. ಪರಿಶೀಲಿಸಿದಾಗ ಮೃತ ಶಶಿಕಲಾರ ಮೃತದೇಹ ಎಂದು ಗೊತ್ತಾಗಿದೆ.

ಈ ಘಟನೆ ಸಂಬಂಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

HOSANAGARA | ಹಿಡ್ಲುಮನೆ ಜಲಪಾತ ಪ್ರವೇಶ ನಿರ್ಬಂಧ !

SHIVAMOGGA RAIN |  ಇಂದು ಬೆಳಗ್ಗೆಯಿಂದ ರಾತ್ರಿವರೆಗೆ ಸೊನಲೆಯಲ್ಲಿ ದಾಖಲಾಯ್ತು ರಾಜ್ಯದಲ್ಲೇ ಅತಿ ಹೆಚ್ಚು ಮಳೆ ! ಮತ್ತೆಲ್ಲೆಲ್ಲಿ ಎಷ್ಟಾಗಿದೆ ಮಳೆ ?

Leave a Comment