ಕನಕದಾಸರ ಕೀರ್ತನೆಗಳು ಎಂದೆಂದಿಗೂ ಪ್ರಚಲಿತ ; ತಹಶೀಲ್ದಾರ್ ರಶ್ಮಿ ಹಾಲೇಶ್

Written by Mahesha Hindlemane

Published on:

HOSANAGARA ; ಕನಕದಾಸರು ರಚಿಸಿರುವ ಸಾಹಿತ್ಯ ವಚನಗಳು ಎಂದೆಂದಿಗೂ ಹಿಂದು ಇಂದು ಮುಂದೆಯೂ ಪ್ರಚಲಿತದಲ್ಲಿರುತ್ತದೆ ಎಂದು ಹೊಸನಗರದ ತಹಶೀಲ್ದಾರ್ ರಶ್ಮಿ ಹಾಲೇಶ್ ಹೇಳಿದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಇಲ್ಲಿನ ತಾಲ್ಲೂಕು ಕಛೇರಿಯ ಆವರಣದಲ್ಲಿ ಕನಕದಾಸರ ಜಯಂತಿ ಆಚರಿಸಲಾಗಿದ್ದು ಕನಕದಾಸರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರಾಗಿದ್ದು ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಗಾರರಾಗಿದ್ದು ಕನಕದಾಸರು ಮತ್ತು ಪುರಂದರದಾಸರನ್ನು ಕರ್ನಾಟಕ ಕೀರ್ತನ ಸಾಹಿತ್ಯದ ಅಶ್ವಿನಿ ದೇವತೆಗಳೆಂದು ಬಣ್ಣಿಸಲಾಗಿದೆ.

ಕನಕದಾಸರು 15-16ನೇ ಶತಮಾನದಲ್ಲಿ ಜಾತಿ ವ್ಯವಸ್ಥೆಯ ಬಗ್ಗೆ ಸಮರ ಸಾರಿದ ಭಕ್ತ ಎಂದರೆ ಕನಕದಾಸರು ಎಂದರೆ ತಪ್ಪಾಗಲಾರದು. ಕನಕದಾಸರು ಅನೇಕ ಕೀರ್ತನೆಯನ್ನು ರಚಿಸಿದ್ದು ಕನಕದಾಸರು ಶ್ರೀ ವ್ಯಾಸರಾಯರ ಮೆಚ್ಚಿನ ಶಿಷ್ಯರು ಆಗಿದ್ದು ವ್ಯಾಸರಾಯರಿಂದ ಮಧ್ವ ತತ್ವ ಶಾಸ್ತçವನ್ನು ಕಲಿತು ಒಪ್ಪಿಕೊಂಡ ಕನಕದಾಸರು ಉಡುಪಿ ಶ್ರೀ ಕೃಷ್ಣದೇವರ ಅನನ್ಯ ಭಕ್ತರು ಆಗಿದ್ದರು ಎಂದು ಹೇಳಿದರು.

ಸಾಹಿತ್ಯ ವಿವಿಧ ಪ್ರಕಾರಗಳಾದ ಕೀರ್ತನೆಗಳು ಸುಳಾದಿಗಳು ಉಗಾಭೋಗಗಳು ಕನ್ನಡ ಸಾಹಿತ್ಯ ಲೋಕಕ್ಕೆ ಅರ್ಪಿಸಿರುವುದಲ್ಲದೇ ಸಂಗೀತ ಪ್ರಪಂಚಕ್ಕೆ ತನ್ನದೇ ಆದ ಕೊಡುಗೆಯನ್ನು ಮುಂಡಿಗೆಗಳ ರೂಪದಲ್ಲಿ ನೀಡಿದವರು ಸುಮಾರು 316 ಕೀರ್ತನೆಗಳು ಹಾಗೂ ಇನ್ನಿತರ ಸಾಹಿತ್ಯ ಮಾತ್ರ ಲಭ್ಯವಾಗಿರುವುದನ್ನು ಕಾಣಬಹುದು ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಆರ್ ಕೃಷ್ಣಮೂರ್ತಿ, ಗ್ರೇಡ್2 ತಹಶೀಲ್ದಾರ್ ರಾಕೇಶ್ ಫ್ರಾನ್ಸಿಸ್ ಬ್ರಿಟ್ಟೋ, ರಾಘವೇಂದ್ರ, ಸುರೇಶ್ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

ಹೊಸನಗರ ಅಗ್ನಿಶಾಮಕ ಠಾಣೆಯಲ್ಲಿ ಕವಿ ದಾರ್ಶನಿಕ ಸಂತ ಸಮಾಜ ಸುಧಾರಕ ತತ್ವಜ್ಞಾನಿ ಸಂಗೀತಗಾರ ಮಹಾನ್ ವ್ಯಕ್ತಿತ್ವದ ಕನಕದಾಸರ ಜಯಂತಿಯನ್ನು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಆಚರಿಸಲಾಯಿತು.

Leave a Comment