ತೀರ್ಥಹಳ್ಳಿ ; ಕಾಂತಾರ ಚಾಪ್ಟರ್ 1 ಸಿನಿಮಾದ ಕಲಾವಿದ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ತೀರ್ಥಹಳ್ಳಿಯ ಆಗುಂಬೆ ಹೋಂಸ್ಟೇನಲ್ಲಿ ನಡೆದಿದೆ.
ಮೃತರನ್ನು ಕೇರಳದ ತ್ರಿಶೂರ್ ಮೂಲದ ಮಿಮಿಕ್ರಿ ಕಲಾವಿದ ವಿಜು ವಿ.ಕೆ ಎಂದು ಗುರುತಿಸಲಾಗಿದೆ. ಇವರು ಕಾಂತಾರ ಸಿನಿಮಾದ ಶೂಟಿಂಗ್ ನಲ್ಲಿ ಭಾಗವಹಿಸಲು ಬಂದು ಆಗುಂಬೆ ಹೋಂಸ್ಟೇನಲ್ಲಿ ತಂಗಿದ್ದರು. ಆದರೆ ಇದ್ದಕ್ಕಿದ್ದಂತೆ ನಿನ್ನೆ ರಾತ್ರಿ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನ ತೀರ್ಥಹಳ್ಳಿಯ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ತೀರ್ಥಹಳ್ಳಿಯ ಜೆ.ಸಿ ಆಸ್ಪತ್ರೆಯಲ್ಲಿ ಮೃತದೇಹ ಇರಿಸಲಾಗಿದೆ. ಕೇರಳದಿಂದ ಕುಟುಂಬಸ್ಥರು ಆಗಮಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಕಳೆದ ಕೆಲವು ದಿನಗಳ ಹಿಂದೆ ಅಷ್ಟೇ ಕಾಮಿಡಿ ಕಿಲಾಡಿಗಳು ಖ್ಯಾತಿಯ ಹಾಗೂ ಕಾಂತಾರ ಸಿನಿಮಾದಲ್ಲಿ ನಟಿಸುತ್ತಿದ್ದ ರಾಕೇಶ್ ಪೂಜಾರಿ ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಇದೀಗ ಕಾಂತಾರ ಚಲನಚಿತ್ರದ ಮತ್ತೋರ್ವ ಮೃತಪಟ್ಟಿದ್ದು ಚಿತ್ರ ತಂಡಕ್ಕೂ ಅಭಿಮಾನಿಗಳಿಗೆ ಶಾಕ್ ಉಂಟಾಗಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.