Karnataka Rain

Karnataka Rain | 18 ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆ ಸಾಧ್ಯತೆ

Karnataka Rain | ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಸೇರಿದಂತೆ ಒಟ್ಟು 18 ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆ (Heavy Rain)ಯಾಗುವ ಸಾಧ್ಯತೆಯಿದ್ದು ಹವಾಮಾನ ಇಲಾಖೆ (IMD)ಯಿಂದ ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

Read More:Karnataka Rain | ರಾಜ್ಯದ ಹಲವೆಡೆ ಇಂದು ಭಾರಿ ಮಳೆ ಸಾಧ್ಯತೆ, ರೆಡ್ ಅಲರ್ಟ್ ಘೋಷಣೆ

ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ 11 ರಿಂದ 20 ಸೆಂ.ಮೀ.ವರೆಗೆ ಮಳೆಯಾಗುವ ಸಾಧ್ಯತೆಯಿದ್ದು, ಆರೆಂಜ್ ಅಲರ್ಟ್ ನೀಡಲಾಗಿದೆ.

karnataka rain

ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಕಲಬುರಗಿ, ಕೊಪ್ಪಳ, ವಿಜಯಪುರ, ರಾಯಚೂರು, ಬಳ್ಳಾರಿ, ಯಾದಗಿರಿ, ಚಿಕ್ಕಮಗಳೂರು, ದಾವಣಗೆರೆ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ 6 ರಿಂದ 11 ಸೆಂ.ಮೀ.ವರೆಗೆ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಅರಬ್ಬಿ ಸಮುದ್ರದಲ್ಲಿ ಮುಂಗಾರು ಪ್ರಬಲವಾಗಿದ್ದು, ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದೆ. ಗಂಟೆಗೆ 35 ರಿಂದ 65 ಕಿ.ಮೀ.ವರೆಗೆ ಗಾಳಿ ಬೀಸುತ್ತಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

Read More:Shivamogga Rain |  ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಎಲ್ಲೆಲ್ಲಿ ಎಷ್ಟು ಮಿ.ಮೀ. ಮಳೆಯಾಗಿದೆ ?

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]