Karnataka Rain | ಕಳೆದೆರಡು ದಿನಗಳಿಂದ ರಾಜ್ಯದಲ್ಲಿ ಮಳೆಯಾರ್ಭಟ ಮುಂದುವರೆದಿದ್ದು, ಇಂದಿನಿಂದ ಎರಡು ದಿನ ಧಾರಾಕಾರ ಮಳೆ (Heavy Rain)ಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದ್ದು, ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ನೀಡಿದೆ.
Agumbe Ghat | ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿತ, ಸಂಚಾರ ಬಂದ್ ಆಗುವ ಆತಂಕ
ಇಂದು ಉತ್ತರ ಕನ್ನಡ (Uttara Kannada), ಉಡುಪಿ (Udupi), ದಕ್ಷಿಣ ಕನ್ನಡ (Dakshina Kannada), ಚಿಕ್ಕಮಗಳೂರು (Chikkamagaluru) ಹಾಗೂ ಶಿವಮೊಗ್ಗ (Shivamogga) ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಬೆಳಗಾವಿ, ಹಾಸನ, ಕೊಡಗು, ಬಾಗಲಕೋಎ, ಬೀದರ್, ಹಾವೇರಿ, ಕಲಬುರಗಿ, ವಿಜಯಪುರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಮೈಸೂರು, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
Shivamogga | ಲ್ಯಾಂಡ್ ಆಗದೆ ಬೆಂಗಳೂರಿಗೆ ಹಿಂತಿರುಗಿದ ಗೃಹ ಸಚಿವರು ಪ್ರಯಾಣಿಸುತ್ತಿದ್ದ ವಿಮಾನ !
ನಾಳೆ ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ 15 ರಿಂದ 20 ಸೆಂ.ಮೀ.ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಧಾರವಾಡ. ಹಾಸನ, ಬೀದರ್, ರಾಯಚೂರು, ಹಾವೇರಿ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.