ಜು.12ರವರೆಗೆ ಮುಂದುವರೆಯಲಿದೆ ಭಾರಿ ಮಳೆ, ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

Written by malnadtimes.com

Published on:

Karnataka Rain | ಕಳೆದ 15 ದಿನಗಳಿಂದ ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದ್ದು ಜು.12ರ ವರೆಗೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ (Heavy Rain) ಮುಂದುವರೆಯಲಿದ್ದು ಅದರಲ್ಲೂ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಜ್ಞ ಸಿ.ಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಮಾಜಿ ಸಚಿವ ಬಿ.ಸಿ. ಪಾಟೀಲ್ ಅಳಿಯ ಆತ್ಮಹತ್ಯೆಗೆ ಶರಣು !

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದ್ದು ಈ ಮೂರು ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್​ ಘೋಷಣೆ ಮಾಡಲಾಗಿದೆ. ಜು.10 ಮತ್ತು 11ರಂದು ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಇರಲಿದೆ ಎಂದು ತಿಳಿಸಿದ್ದಾರೆ.

ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಜು.12ರವರೆಗೆ ಯೆಲ್ಲೋ ಅಲರ್ಟ್ ಇರಲಿದ್ದು ಬೆಳಗಾವಿ, ಬೀದರ್​, ಕಲಬುರಗಿ, ಕೊಡಗು, ಹಾಸನ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ರಾಜ್ಯದ ಮಳೆ ಕುರಿತು ಹವಾಮಾನ ಇಲಾಖೆ ತಜ್ಞ ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ.

ಕಾಣೆಯಾಗಿದ್ದ ಯುವತಿ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆ !

ಇಂದು ಉತ್ತರ ಒಳನಾಡಿನ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೆೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರ ಜಿಲ್ಲೆಗಳಲ್ಲಿ ಹಲವೆಡೆ ಗಾಳಿಯ ವೆೇಗ (30-40 kmph) ಸಹಿತ ಸಾಧಾರಣ ಮಳೆ, ಗುಡುಗು ಸಹಿತ ಗಾಳಿ ಬೀಸುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಕರ್ನಾಟಕದ ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.

Leave a Comment