Hosanagara

Karnataka Rain | ಕಳೆದ 24 ಗಂಟೆಗಳಲ್ಲಿ ಹೊಸನಗರ ತಾಲೂಕಿನ ಎಲ್ಲೆಲ್ಲಿ ಎಷ್ಟು ಮಿ.ಮೀ. ಮಳೆಯಾಗಿದೆ ?

Hosanagara | ಮಳೆ(ಲೆ)ನಾಡಿನ ತವರೂರು ಲಿಂಗನಮಕ್ಕಿ ಜಲಾಶಯಕ್ಕೆ ನೀರುಣಿಸುವ ಪ್ರಧಾನ ಜಲಾನಯನ ಪ್ರದೇಶವಾದ ಹೊಸನಗರ ತಾಲೂಕಿನಾದ್ಯಂತ ಮೃಗಶಿರ ಮಳೆಯ (Rain) ಅಬ್ಬರ ಜೋರಾಗಿದ್ದು ಮಳೆ ಇಲ್ಲದೆ ಕಂಗಾಲಾಗಿ ತಲೆ ಮೇಲೆ ಕೈ ಹೊತ್ತು ಕುಳಿತ್ತಿದ್ದ ಅನ್ನದಾತ ಇದೀಗ ನಿಟ್ಟುಸಿರು ಬಿಡುವಂತಾಗಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಎಲ್ಲೆಲ್ಲಿ ಎಷ್ಟು ಮಳೆ ?

ಭಾನುವಾರ ಬೆಳಗ್ಗೆ 8 ಗಂಟೆಗೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ತಾಲೂಕಿನ ಹುಲಿಕಲ್ಲಿನಲ್ಲಿ ಅತ್ಯಧಿಕ 113 ಮಿ.ಮೀ. ಮಳೆ ಸುರಿದಿದೆ. ಉಳಿದಂತೆ ಮಾಸ್ತಿಕಟ್ಟೆಯಲ್ಲಿ 107, ಮಾಣಿಯಲ್ಲಿ 104, ಹೊಸೂರು-ಸಂಪೆಕಟ್ಟೆ 84, ಬಿದನೂರು ನಗರದ ಮತ್ತು ಮೇಲಿನಬೆಸಿಗೆಯಲ್ಲಿ 68, ಯಡೂರಿನಲ್ಲಿ 64, ಹೊಸನಗರದಲ್ಲಿ 58 ಮಿಲಿ ಮೀಟರ್ ಮಳೆ ದಾಖಲಾಗಿದೆ.

Read More

Karnataka Rain | ಬೆಳೆಗೆ ಜೀವ ಕಳೆ ತಂದ ಮಳೆ, ಸಂತಸದಲ್ಲಿ ರೈತಾಪಿ ವರ್ಗ

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>