Karnataka Rain

Karnataka Rain | ಇನ್ನೆರಡು ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ

Karnataka Rain | ರಾಜ್ಯದಲ್ಲಿ ಹಲವೆಡೆ ಕಳೆದ ಎರಡ್ಮೂರು ದಿನಗಳಿಂದ ಜೋರು ಮಳೆಯಾಗುತ್ತಿದ್ದು ಅದರಲ್ಲೂ ಕೆಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರಿ ಮಳೆ (Heavy Rain)ಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

WhatsApp Group Join Now
Telegram Group Join Now
Instagram Group Join Now

ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವೆಡೆ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಮತ್ತು ಬಾಗಲಕೋಟೆ, ಗದಗ, ದಾವಣಗೆರೆ, ಮೈಸೂರು, ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಣೆ ಮಾಡಿದೆ.

karnataka rain

ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯ ಆಗುಂಬೆ ಸೇರಿದಂತೆ ಹಲವು ಕಡೆ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Read More

ಆಧಾರ್ ನಂಬರ್ ಹಾಕಿ ಮೊಬೈಲ್ ನಲ್ಲಿ Farmers FID ಹೀಗೆ ಚೆಕ್ ಮಾಡಿ

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಅಬ್ಬಿ ಜಲಪಾತದಲ್ಲಿ ಕಾಲುಜಾರಿ ನೀರು ಪಾಲಾಗಿದ್ದ ಯುವಕನ ಶವ ಪತ್ತೆ !

PMSY :ಮನೆಗೆ ಉಚಿತವಾಗಿ ಸೋಲಾರ್ ಹಾಕಿಸಬೇಕೆ? ಸೂರ್ಯ ಘರ್ ಯೋಜನೆಗೆ ಅರ್ಜಿ ಇಂದೇ ಸಲ್ಲಿಸಿ

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!