Karnataka Rain : ಇಂದು ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ, ಇನ್ನೆಷ್ಟು ದಿನ ಮಳೆಯಾಗಲಿದೆ ?

Written by malnadtimes.com

Published on:

Karnataka Rain | ರಾಜ್ಯದ ಹಲವೆಡೆ ಭಾರೀ ಮಳೆ (Heavy Rain)ಯಾಗುತ್ತಿದ್ದು, ಹವಾಮಾನ ಇಲಾಖೆಯ (IMD) ಮಾಹಿತಿ ಪ್ರಕಾರ, ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 3ರವರೆಗೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು, 5 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ.

WhatsApp Group Join Now
Telegram Group Join Now
Instagram Group Join Now

ಸಾಗರ ತಾಲೂಕಿನ ಶಾಲೆ, ಕಾಲೇಜುಗಳಿಗೂ ಬುಧವಾರ ರಜೆ ಘೋಷಣೆ

ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಇಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಆ.1ರಂದು ಆರೆಂಜ್ ಅಲರ್ಟ್, ಆ.2 ಮತ್ತು 3ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಭಾಗಗಳಲ್ಲಿ ಗಾಳಿಯ ವೇಗವು 40-50 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ.

ಕಾಫಿನಾಡಿನ ಮಲೆನಾಡು ಭಾಗದಲ್ಲಿ ಧಾರಾಕಾರ ಮ‌ಳೆ‌ಯಾಗುತ್ತಿದ್ದು ಇಂದು ರೆಡ್ ಅಲರ್ಟ್ ಘೋಷಿಸಿದ ಹಿನ್ನೆಲೆಯಲ್ಲಿ ಮಲೆನಾಡು ಭಾಗದ ಆರು ತಾಲೂಕಿನ ಅಂಗನವಾಡಿ, ಶಾಲಾ, ಕಾಲೇಜು, ಪದವಿ ಕಾಲೇಜಿಗೂ ಮುಂಜಾಗ್ರತಾ ಕ್ರಮವಾಗಿ ರಜೆ‌ ಘೋಷಣೆ ಮಾಡಲಾಗಿದೆ.

red alert for these districts today.
red alert for these districts today.

ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ, ಚಿಕ್ಕಮಗಳೂರು, ತಾಲೂಕಿನ ಅಂಗನವಾಡಿ, ಶಾಲಾ,ಕಾಲೇಜುಗಳಿಗೆ ‌ರಜೆ‌ ಘೋಷಣೆ ಮಾಡಲಾಗಿದೆ. ಬಯಲುಸೀಮೆ ತಾಲೂಕುಗಳಾದ ಕಡೂರು, ತರೀಕೆರೆ, ಅಜ್ಜಂಪುರಕ್ಕೆ ರಜೆ ಇಲ್ಲವೆಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್‌ ಆದೇಶ ಹೊರಡಿಸಿದ್ದಾರೆ.

ಇನ್ನೂ ಭಾರಿ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಹೊಸನಗರ, ಸಾಗರ ಮತ್ತು ಭದ್ರಾವತಿ ತಾಲೂಕಿನಾದ್ಯಂತ ಇಂದು ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ರಜೆ ಘೋಷಿಸಿ ಆಯಾ ತಾಲೂಕಿನ ತಹಶೀಲ್ದಾರ್‌ ಆದೇಶಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರ ಹೋಬಳಿಯಲ್ಲಿ ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲೇ ಅತ್ಯಧಿಕ ಮಳೆ ಸುರಿದಿದೆ. ನದಿ, ಹಳ್ಳ-ಕೊಳ್ಳಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ.

School Holiday | ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ತೀರ್ಥಹಳ್ಳಿ ತಾಲ್ಲೂಕಿನಾದ್ಯಂತ ಬುಧವಾರ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

Leave a Comment