Karnataka Rain |  ಇನ್ನೆರಡು ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ !

Written by Mahesh Hindlemane

Published on:

Karnataka Rain | ರಾಜ್ಯದಲ್ಲಿ ಮಳೆ ಮುಂದುವರೆದಿದ್ದು ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆ (Heavy Rain)ಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ (IMD) ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ‌.

WhatsApp Group Join Now
Telegram Group Join Now
Instagram Group Join Now

ಕರಾವಳಿಯ ದಕ್ಷಿಣ ಕನ್ನಡ (Dakshina Kannada), ಉತ್ತರ ಕನ್ನಡ (Uttara Kannada), ಉಡುಪಿ (Udupi), ಮಲೆನಾಡಿನ ಚಿಕ್ಕಮಗಳೂರು (Chikkamagaluru), ಶಿವಮೊಗ್ಗ (Shivamogga), ಕೊಡಗು (Kodagu) ಜಿಲ್ಲೆಗಳಲ್ಲಿ 6ರಿಂದ 15 ಸೆಂ.ಮೀ.ವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಜುಲೈ 1 ಮತ್ತು 2 ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

Karnataka Rain

ಉಳಿದಂತೆ ರಾಜ್ಯದಲ್ಲಿ ಮುಂದಿನ ಒಂದು ವಾರ ಸಾಧಾರಣ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದ ಗಾಳಿ ಬೀಸುವ ಸಂಭವವಿದ್ದು ಕರಾವಳಿಯಲ್ಲಿ 35 ರಿಂದ 50 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

Read More

Malenadu Rain | ಕಳೆದ 24 ಗಂಟೆಗಳಲ್ಲಿ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯ ಎಲ್ಲೆಲ್ಲಿ ಎಷ್ಟು ಪ್ರಮಾಣದ ಮಳೆ ಸುರಿದಿದೆ ?

ಭದ್ರಾವತಿ ಕಾರ್ಖಾನೆ ಭವಿಷ್ಯದ ಬಗ್ಗೆ ಶೀಘ್ರ ನಿರ್ಧಾರ ; ಕೇಂದ್ರ ಸಚಿವ ಹೆಚ್.ಡಿ‌. ಕುಮಾರಸ್ವಾಮಿ

ಹಿರಿಯ ಪತ್ರಕರ್ತ, ಸಹಕಾರಿ ಧುರೀಣ ಎಸ್.ಜಿ.ರಂಗನಾಥ ಇನ್ನಿಲ್ಲ !

Author Profile

Mahesh Hindlemane
Mahesh Hindlemane
ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.

Leave a Comment