Karnataka Rain | ಇನ್ನೂ ನಾಲ್ಕು ದಿನ ಮುಂದುವರೆಯಲಿದೆ ಮಳೆ

Written by malnadtimes.com

Updated on:

ಬೆಂಗಳೂರು : ಮಳೆಯಾರ್ಭಟ ರಾಜ್ಯದಲ್ಲಿ (Karnataka Rain) ಇನ್ನು ನಾಲ್ಕು ದಿನ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

WhatsApp Group Join Now
Telegram Group Join Now
Instagram Group Join Now

ಕರಾವಳಿಯ ದಕ್ಷಿಣ ಕನ್ನಡ (Dakshina Kannada), ಉಡುಪಿ (Udupi)ಯಲ್ಲಿ ಭಾನುವಾರ ಭಾರಿ ಮಳೆ (Heavy Rain) ಆಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ (Cyclone) ಪರಿಣಾಮದಿಂದಾಗಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಲಾಗಿದೆ.

ಮಲೆನಾಡು (Malenadu), ದಕ್ಷಿಣ ಕರ್ನಾಟಕ ಭಾಗದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದ್ದು ಕೊಡಗು, ಚಿಕ್ಕಮಗಳೂರು, ಹಾಸನ, ಬೆಂಗಳೂರು, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ, ಬಾಗಲಕೋಟೆ, ಬೆಳಗಾವಿ, ಹಾವೇರಿ, ಕಲಬುರಗಿಯಲ್ಲಿ ಗುಡುಗು ಮಿಂಚು ಸಹಿತ ಮುಂದಿನ ಎರಡು ದಿನ ಸಾಧಾರಣ ಮಳೆಯಾಗುವ ಸಂಭವ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.

ಮುಂದಿನ ಐದು ದಿನ ಗರಿಷ್ಠ ತಾಪಮಾನದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ.

Read More :Karnataka Rain | ಇಂದು ಈ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ,…

Leave a Comment