Karnataka Rain | ರಾಜ್ಯಕ್ಕೆ ಇಂದು ಮುಂಗಾರು ಮಳೆ (Monsoon Rain) ಪ್ರವೇಶಿಸುವ ಸಾಧ್ಯತೆ ಇದ್ದು, ಪರಿಣಾಮ ಇಂದು ಬೆಂಗಳೂರು (Bangalore) ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ (Heavy Rain)ಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ 8 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಈ ಜಿಲ್ಲೆಗಳಿಗೆ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಕೇರಳ ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದ್ದು, ಇಂದು ಕರ್ನಾಟಕಕ್ಕೆ ಪ್ರವೇಶಿಸುವ ಸಾಧ್ಯತೆ ಇದೆ. ಈ ಬಗ್ಗೆ ಇಂದು ಅಥವಾ ನಾಳೆ ಹವಾಮಾನ ಇಲಾಖೆ ಅಧಿಕೃತವಾಗಿ ಘೋಷಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇಂದು ಬೆಂಗಳೂರು (Bangalore), ಮೈಸೂರು (Mysore), ಮಂಡ್ಯ (Mandya), ಹಾಸನ (Hasana), ಕೊಡಗು (Kodagu), ಚಿಕ್ಕಮಗಳೂರು (Chikkamagaluru), ಶಿವಮೊಗ್ಗ (Shivamogga), ಉಡುಪಿ (Udupi), ದಕ್ಷಿಣ ಕನ್ನಡ (Dakshina Kannada) ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
Read More
ಅಡಿಕೆ ಕಳವು ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾಯ್ತು ಪೊಲೀಸರ ಕಾರ್ಯಾಚರಣೆ

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.