Karnataka Rain:ಮುಂಗಾರು ಮಳೆ ಮತ್ತೆ ಆರ್ಭಟಿಸಲು ಸಜ್ಜಾಗಿದ್ದು, ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಜೂನ್ 12ರಿಂದ ಮುಂದಿನ ಮೂರು ದಿನಗಳವರೆಗೆ ಮಳೆಯ ಪ್ರಮಾಣ ಏರಿಕೆಯಾಗಲಿದ್ದು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಥವಾ ಆರೆಂಜ್ ಅಲರ್ಟ್ ನೀಡಲಾಗಿದೆ.
ಮುಂಬರುವ ದಿನಗಳಲ್ಲಿ ಕರ್ನಾಟಕದ 11ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ 115 ಮಿ.ಮೀ ಅಥವಾ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಇದರಲ್ಲಿ ಕಲಬುರಗಿ, ವಿಜಯಪುರ, ಯಾದಗಿರಿ, ಬೆಂಗಳೂರು, ಬಾಗಲಕೋಟೆ, ರಾಯಚೂರು, ಕೊಪ್ಪಳ, ಧಾರವಾಡ, ಗದಗ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಉಡುಪಿ, ಹಾಸನ, ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗಳೂ ಸೇರಿವೆ.
ಜೂನ್ 13 ರಂದು ಈ ಜಿಲ್ಲೆಗಳಿಗೆ ರೆಡ್ ಅಲರ್ಟ್:
- ಉತ್ತರ ಕನ್ನಡ
- ದಕ್ಷಿಣ ಕನ್ನಡ
- ಉಡುಪಿ
- ಕೊಡಗು
- ಹಾಸನ
- ಚಿಕ್ಕಮಗಳೂರು
- ಶಿವಮೊಗ್ಗ
- ಹಾವೇರಿ
- ಧಾರವಾಡ
- ಬೆಳಗಾವಿ
ಈ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಂತ ಭಾರೀ ಮಳೆ ಸುರಿಯುವ ನಿರೀಕ್ಷೆ ಇದೆ. 110-200 ಮಿ.ಮೀ ಮಳೆಯ ಪ್ರಮಾಣ ದಾಖಲಾಗಬಹುದು ಎಂದು ಮುನ್ಸೂಚಿಸಲಾಗಿದೆ.
ಇತ್ತೀಚೆಗೆ ಒಂದು ವಾರ ಮಳೆಯ ಪ್ರಮಾಣ ಕಡಿಮೆಯಾಗಿದ್ದರೂ, ಇದೀಗ ಮತ್ತೆ ವರುಣನ ಆರ್ಭಟ ಆರಂಭವಾಗುತ್ತಿದೆ. ಜೂನ್ ಮೊದಲ ವಾರದಲ್ಲಿ ಮುಂಗಾರು ಪ್ರಾರಂಭವಾದರೂ ಕಡಿಮೆ ಮಳೆಯಾಯಿತು. ಆದರೆ ಈಗ ಮಳೆಯ ಅಬ್ಬರ ನಿರೀಕ್ಷಿಸಲಾಗಿದೆ.
Read More
PMFBY:ಪ್ರಧಾನಮಂತ್ರಿ ಫಸಲ್ ಭೀಮಾ ಬೆಳೆ ವಿಮೆ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?
SSC ನೇಮಕಾತಿ 2025: ಒಟ್ಟು 14,582 ಹುದ್ದೆಗಳಿಗೆ ಅರ್ಜಿ ಆಹ್ವಾನ !
MalnadTimes.com ವೆಬ್ಸೈಟ್ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.
Malnad Times ಮೂಲಕ ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.