Featured

Karnataka rain : ಜೂನ್ 11ರಿಂದ ರಾಜ್ಯದಲ್ಲಿ ಮತ್ತೆ ಅಬ್ಬರಿಸಲಿರುವ ಮುಂಗಾರು ಮಳೆ ! ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Karnataka rain :ಮೇ ತಿಂಗಳ ಕೊನೆಯ ವಾರದಲ್ಲಿ ರಾಜ್ಯದಲ್ಲಿ ಉತ್ತಮ ಮಳೆಯಾಗಿದ್ದು ಆದರೆ ಜೂನ್ ತಿಂಗಳಲ್ಲಿ ಮಳೆಯ ಪ್ರಮಾಣ ಸಂಪೂರ್ಣವಾಗಿ ಕಡಿಮೆಯಾಗಿರುವುದು ಕಂಡು ಬಂದಿದೆ. ಮೋಡ ಕವಿದ ವಾತಾವರಣ ಹಿನ್ನಡೆಯಾದ ನಂತರ ರಾಜ್ಯದಲ್ಲಿ ಬಿಸಿಲು ಕಾಣಿಸಿಕೊಂಡಿದೆ. ಕರ್ನಾಟಕ ಮತ್ತು ಬೆಂಗಳೂರಿನಲ್ಲಿ ಮುಂಗಾರು ಮಳೆಯ ಪ್ರಮಾಣವು ಜೋರಾಗಿದೆ.

WhatsApp Group Join Now
Telegram Group Join Now
Instagram Group Join Now

ಹವಾಮಾನ ಇಲಾಖೆ ಈ ತಿಂಗಳ ಎರಡನೇ ವಾರದಲ್ಲಿ ಭಾರಿ ಮಳೆ ಬೀರುವ ಮುನ್ಸೂಚನೆ ನೀಡಿದೆ.ಜೂನ್ 11 ರಿಂದ ಭಾರಿ ಮಳೆಯ ಸಾಧ್ಯತೆ ಇದೆ ಎಂಬ ಮಾಹಿತಿಯನ್ನು ಹವಾಮಾನ ಇಲಾಖೆ ನೀಡಿದೆ. ಹವಾಮಾನ ಇಲಾಖೆ ಕಲ್ಪನೆಯ ಪ್ರಕಾರ, ಜೂನ್ 7ರಿಂದ ರಾಜ್ಯದಲ್ಲಿ ಮಳೆ ಹಂತ ಹಂತವಾಗಿ ಹೆಚ್ಚಾಗಲಿದೆ. ಬಿರು ಗಾಳಿಯೊಂದಿಗೆ ಸುಧಾರಿತ ಪ್ರಮಾಣದಲ್ಲಿ ಮಳೆ ಸುರಿಯುವ ಸೂಚನೆ ನೀಡಲಾಗಿದೆ. ಪ್ರತಿ ಗಂಟೆಗೆ 40-50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ.

ಜೂನ್ 11ರಂದು ಬಳ್ಳಾರಿ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಜೂನ್ 12ರಂದು ಚಿಕ್ಕಬಳ್ಳಾಪುರ, ಬಳ್ಳಾರಿ, ವಿಜಯಪುರ, ಕಲಬುರಗಿ, ಬೆಳಗಾವಿ, ಬಾಗಲಕೋಟೆ, ಜೊತೆಗೆ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಸಹ ಯೆಲ್ಲೋ ಅಲರ್ಟ್ ಜಾರಿ ಮಾಡಲಾಗಿದೆ. ಉತ್ತರ ಕರ್ನಾಟಕದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ.

ಜೂನ್ 7 ಮತ್ತು 8ರಂದು ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳನ್ನು ಹೊರತುಪಡಿಸಿ, ಇನ್ನಿತರೆ 28 ಜಿಲ್ಲೆಗಳಲ್ಲಿ ಪ್ರಾಯಶಃ ಹಗುರ ಹಾಗೂ ಸಾಧಾರಣ ಮಳೆಯಾಗಲಿದೆ. ಮುಂದಿನ ದಿನಗಳಲ್ಲಿ ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Read More

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

Good News : ರಾಜ್ಯದ ಶಾಲಾ ಮಕ್ಕಳಿಗೆ ವಾರದಲ್ಲಿ ಆರು ದಿನ ಮೊಟ್ಟೆ, ಬಾಳೆಹಣ್ಣು ವಿತರಣೆ !

ಅನರ್ಹ ಪಡಿತರ ಚೀಟಿದಾರರಿಗೆ ಬಿಗ್ ಶಾಕ್ : ಶೀಘ್ರವೇ ಪಡಿತರ ಚೀಟಿ ಸಮೀಕ್ಷೆ!

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650