Karnataka Rain | ರಾಜ್ಯದ ಹಲವೆಡೆ ಇಂದು ಭಾರಿ ಮಳೆ ಸಾಧ್ಯತೆ, ರೆಡ್ ಅಲರ್ಟ್ ಘೋಷಣೆ

Written by malnadtimes.com

Published on:

Karnataka Rain | ಕರಾವಳಿ (Karavali) ಮತ್ತು ಮಲೆನಾಡು (Malenadu) ಜಿಲ್ಲೆಗಳು ಸೇರಿದಂತೆ ರಾಜ್ಯದ ಹಲವೆಡೆ ಇಂದು ಭಾರೀ ಮಳೆ (Heavy Rain)ಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

WhatsApp Group Join Now
Telegram Group Join Now
Instagram Group Join Now

Read More:Black Pepper Price | 6 ವರ್ಷಗಳ ಬಳಿಕ ಕಾಳುಮೆಣಸಿನ ದರದಲ್ಲಿ ಭಾರಿ ಏರಿಕೆ, ಬೆಳೆಗಾರರು ಹರ್ಷ

ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಗಂಟೆಗೆ 55-66 ಕಿ.ಮೀ ವೇಗದ ಸುಳಿಗಾಳಿ ಪರಿಣಾಮದಿಂದಾಗಿ ರಾಜ್ಯಾದ್ಯಂತ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿಯ ಉಡುಪಿ ಮತ್ತು ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಇಂದು ಉತ್ತರ ಕರ್ನಾಟಕದ ಯಾದಗಿರಿ, ರಾಯಚೂರು, ಕಲಬುರಗಿ ಹಾಗೂ ದಾವಣಗೆರೆ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

karnataka rain

ಇನ್ನೂ ಬಾಗಲಕೋಟೆ, ವಿಜಯಪುರ, ಬಳ್ಳಾರಿ ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ನೀಡಲಾಗಿದೆ.

ಏನಿದು ಅಲರ್ಟ್ ?

  • 204 ಮಿ.ಮೀ.ಗಿಂತ ಅಧಿಕ ಮಳೆ ಬೀಳುವ ಮೂನ್ಸೂಚನೆ ಇದ್ದರೆ ರೆಡ್ ಅಲರ್ಟ್.
  • 115 ರಿಂದ 204 ಮಿ.ಮೀ.ವರೆಗೆ ಮಳೆಯಾಗುವ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್.
  • 64 ರಿಂದ 115 ಮಿ.ಮೀ. ಮಳೆ ಸುರಿಯುವ ಸಂಭವವಿದ್ದರೆ ಆ ಪ್ರದೇಶಗಳಿಗೆ ಯೆಲ್ಲೋ ಅಲರ್ಟ್.

Read More:ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ, 30ಕ್ಕೂ ಹೆಚ್ಚು ಮಂದಿಗೆ ಗಾಯ !

Leave a Comment