Karnataka Rain | ಮುಂದಿನ 4 ದಿನ ರಾಜ್ಯದ ಹಲವೆಡೆ ಭಾರೀ ಮಳೆ (Heavy Rain) ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
READ MORE:ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಸಭೆ | ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಜಾರಿ ಮತ್ತು ಯಶಸ್ಸಿಗೆ ಸಹಕರಿಸಿ
ಉತ್ತರ ಕನ್ನಡ (Utthara Kannada), ದಕ್ಷಿಣ ಕನ್ನಡ (Dakshina Kannada), ಉಡುಪಿ (Udupi), ಬೆಳಗಾವಿ (Belagavi), ಚಿಕ್ಕಮಗಳೂರು (Chikkamagaluru), ಹಾಸನ (Hasana), ಕೊಡಗು (Kodagu), ಶಿವಮೊಗ್ಗ (Shivamogga) ಸೇರಿದಂತೆ ಹಲವೆಡೆ ಧಾರಾಕಾರ ಮಳೆ ಸುರಿಯಲಿದ್ದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಇನ್ನೂ ಮಲೆನಾಡಿನ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ತಡರಾತ್ರಿಯಿಂದ ಬಿಟ್ಟುಬಿಡದೆ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು ಜನಜೀವನ ಅಸ್ತವ್ಯಸ್ಥಗೊಂಡಿದೆ.
READ MORE:ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಯಾವೆಲ್ಲ ಪ್ರದೇಶಗಳಲ್ಲಿ ಎಷ್ಟು ಪ್ರಮಾಣದ ಮಳೆಯಾಗಿದೆ ?