Karnataka Rain

Karnataka Rain | ರಾಜ್ಯದ ಹಲವೆಡೆ ಭಾರಿ ಮಳೆ ಸಂಭವ, ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಣೆ

Karnataka Rain | ರಾಜ್ಯದ ಹಲವು ಜಿಲ್ಲೆಗಳಲ್ಲಿ ಜೂ.10 ರವರೆಗೂ ಭಾರೀ ಮಳೆ (Heavy Rain)ಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

WhatsApp Group Join Now
Telegram Group Join Now
Instagram Group Join Now

ಬೆಳಗಾವಿ (Belagavi), ಧಾರವಾಡ (Daravada), ಹಾವೇರಿ (Haveri), ಉತ್ತರ ಕನ್ನಡ (Utthara Kannada) ಮತ್ತು ಉಡುಪಿ (Udupi) ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಬೆಂಗಳೂರು, ಚಿಕ್ಕಬಳ್ಳಾಪುರ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಗದಗ, ಯಾದಗಿರಿ, ಕಲಬುರಗಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೆಲವು ಕಡೆ ಭಾರಿ ಮಳೆ ಸಾಧ್ಯತೆ ಇದ್ದು, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

karnataka rain
karnataka rain

ಪ್ರತಿ ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ಬೆಂಗಳೂರು ನಗರದಲ್ಲಿ ಜೂನ್ 10ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ತಜ್ಞ ಸಿ.ಎಸ್ ಪಾಟೀಲ್ ಅಧಿಕೃತ ಮಾಹಿತಿ ನೀಡಿದ್ದಾರೆ.

Read More :ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಗೆಲುವು ಸೈದ್ಧಾಂತಿಕ ಗೆಲುವಲ್ಲ ; ಮಾಜಿ ಸಚಿವ ಕಿಮ್ಮನೆ ರತ್ನಾಕರ್

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!