ತೀರ್ಥಹಳ್ಳಿ ; 14 ವರ್ಷ ವಯೋಮಿತಿಯೊಳಗಿನ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಸರ್ಕಾರಿ ಪ್ರೌಢಶಾಲೆ ಕಟ್ಟೆಹಕ್ಕಲು ಇಲ್ಲಿನ 8ನೇ ತರಗತಿಯ ವಿದ್ಯಾರ್ಥಿಗಳಾದ ಮಾನ್ವಿ ಮತ್ತು ಪೂರ್ವಿಕಾ, ರಿದಮಿಕ್ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇನ್ನೂ ಅಪೂರ್ವ ಮತ್ತು ಶ್ರಾವಣಿ ಆರ್ಟಿಸ್ಟಿಕ್ ಯೋಗಾಸನದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಈ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ, ತರಬೇತಿ ನೀಡಿದ ದೈಹಿಕ ಶಿಕ್ಷಕರಿಗೆ ಹಾಗೂ ಸಹಕರಿಸಿದ ಪೋಷಕರಿಗೆ ಶಾಲಾ ಎಸ್‌ಡಿಎಂಸಿ, ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕ ವೃಂದದವರು ಅಭಿನಂದಿಸಿ, ಶುಭ ಹಾರೈಸಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.