THIRTHAHALLI ; ಶಿವಮೊಗ್ಗದಲ್ಲಿ ನಡೆದ ಪ್ರೌಢಶಾಲಾ ವಿಭಾಗದ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆಯಲ್ಲಿ ತೀರ್ಥಹಳ್ಳಿ ತಾಲೂಕಿನ ಸರ್ಕಾರಿ ಪ್ರೌಢಶಾಲೆ ಕಟ್ಟೆಹಕ್ಕಲು 9ನೇ ತರಗತಿಯ ವಿದ್ಯಾರ್ಥಿ ಸಾತ್ವಿಕ್ ಎನ್.ಎಸ್. ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾನೆ.

ಈ ಪ್ರತಿಭಾವಂತ ವಿದ್ಯಾರ್ಥಿಗೆ ಮುಖ್ಯೋಪಾಧ್ಯಾಯರು, ಎಸ್.ಡಿ.ಎಂ.ಸಿ ಸದಸ್ಯರು ಮತ್ತು ಶಿಕ್ಷಕರು ಅಭಿನಂದಿಸಿ, ಶುಭ ಹಾರೈಸಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.