ಹೊಸನಗರ ; ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಗುರುತಿಸಿಕೊಳ್ಳುವುದರ ಜೊತೆಗೆ ಎಲ್ಲರೊಂದಿಗೂ ಉತ್ತಮ ಸಂಬಂಧ ಇಟ್ಟುಕೊಂಡಿರುವ ವಸವೆ ಕೌಶಿಕ್ ಭಂಡಾರಿ ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಇಂಟೆಕ್ ವಿಭಾಗದ ತಾಲ್ಲೂಕು ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ಜಿಲ್ಲಾ ಯುವ ಕಾಂಗ್ರೆಸ್ ಇಂಟೆಕ್ ವಿಭಾಗದ ಅಧ್ಯಕ್ಷ ಸಂತೋಷ್ ಕುಮಾರ್ ಕೌಶಿಕ್‌ರವರ ರಾಜಕೀಯದಲ್ಲಿ ಅರಳುವ ಪ್ರತಿಭೆಯನ್ನು ಗುರುತಿಸಿ ಈ ಮಹತ್ವದ ಜವಾಬ್ದಾರಿಯನ್ನು ಇವರಿಗೆ ನೀಡಿದ್ದಾರೆ.
ಅಧಿಕಾರ ವಹಿಸಿಕೊಂಡ ವಸವೆ ಕೌಶಿಕ್ ಮಾತನಾಡಿ, ಎಲ್ಲ ಹಿರಿಯ ಕಿರಿಯರ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಜೊತೆ ಕೆಲಸ ಮಾಡಿಕೊಂಡು ಹೋಗುತ್ತೇವೆ. ಪಕ್ಷ ನನಗೆ ಜವಾಬ್ದಾರಿಯುತ ಸ್ಥಾನ ನೀಡಿದೆ. ಈ ಜವಾಬ್ದಾರಿ ನೀಡಲು ಕಾರಣರಾದ ಎಲ್ಲ ಮುಖಂಡುರುಗಳಿಗೆ ಧನ್ಯವಾದ ಅರ್ಪಿಸಿದ್ದಾರೆ.
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

