ಹೊಸನಗರ

ಡಿ. 18ರಂದು ‘ಕೆಳದಿ ವೀರಶೈವ ಮಲ್ಲವ ಸಮಾಜೋತ್ಸವ’ ; ಎಲ್ಲಿ ನಡೆಯಲಿದೆ ಕಾರ್ಯಕ್ರಮ?

ಡಿಸೆಂಬರ್ 18ರ ಶುಕ್ರವಾರದಂದು ‘ಕೆಳದಿ ವೀರಶೈವ ಮಲ್ಲವ ಸಮಾಜೋತ್ಸವ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಮಲ್ಲವ ವೀರಶೈವ ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ಚಿಕ್ಕಮಣತಿ ಬಿ. ಯುವರಾಜ್ ತಿಳಿಸಿದರು.

Mallava Community’s

ಹೊಸನಗರ: ತಾಲ್ಲೂಕಿನ ಬ್ರಹ್ಮೇಶ್ವರದ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಡಿಸೆಂಬರ್ 18ರ ಶುಕ್ರವಾರದಂದು ‘ಕೆಳದಿ ವೀರಶೈವ ಮಲ್ಲವ ಸಮಾಜೋತ್ಸವ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಮಲ್ಲವ ವೀರಶೈವ ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ಚಿಕ್ಕಮಣತಿ ಬಿ. ಯುವರಾಜ್ ತಿಳಿಸಿದರು.

WhatsApp Group Join Now
Telegram Group Join Now
Instagram Group Join Now

ಪಟ್ಟಣದ ಶೀತಲ್ ಹೋಟೆಲ್‌ನಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದ ಹಿನ್ನೆಲೆ ಮತ್ತು ಸಮಾಜದ ಸ್ಥಿತಿಗತಿಗಳ ಬಗ್ಗೆ ವಿವರಗಳನ್ನು ಹಂಚಿಕೊಂಡರು.

ರಾಜಕೀಯವಾಗಿ ಮಲ್ಲವ ಸಮಾಜಕ್ಕೆ ನಿರಂತರ ಕಡೆಗಣನೆ:

“ಪಶ್ಚಿಮ ಘಟ್ಟದ ಮಲೆನಾಡು ಭಾಗದಲ್ಲಿ ವಾಸಿಸುವ ವೀರಶೈವ ಒಳಪಂಗಡಗಳಲ್ಲಿ ಒಂದಾದ ಮಲ್ಲವ ಸಮಾಜ, ಸ್ವಾತಂತ್ರ್ಯೋತ್ತರ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಿರಂತರವಾಗಿ ಶೋಷಣೆಗೆ ಒಳಗಾಗಿದೆ. ಸ್ವಾತಂತ್ರ್ಯ ಪೂರ್ವದಲ್ಲಿ ಗೌರವಯುತ ಬದುಕು ಕಂಡಿದ್ದ ಸಮಾಜದಲ್ಲಿ, ಈ ಹಿಂದೆ ದಿ. ಕೆ.ಜಿ. ಒಡೆಯರ್ ಎರಡು ಬಾರಿ ಸಂಸದರಾಗಿ ಸೇವೆ ಸಲ್ಲಿಸಿದ್ದರೆ, ಮಲ್ಲಿಕಾರ್ಜುನಪ್ಪ ಎಣ್ಣೆಕೊಪ್ಪ ಸ್ವಾತಂತ್ರ್ಯ ಹೋರಾಟದಲ್ಲಿ ಹಲವು ಬಾರಿ ಜೈಲು ಶಿಕ್ಷೆ ಅನುಭವಿಸಿದ್ದರು. ಆದರೆ ಇತ್ತೀಚಿನ ವರ್ಷಗಳಲ್ಲಿ ಪರಿಸ್ಥಿತಿ ತೀರಾ ಹದಗೆಟ್ಟಿದೆ.”

“ಜಿಲ್ಲೆಯ ವೀರಶೈವರಲ್ಲಿ ಮಲ್ಲವರೇ ಬಹುಸಂಖ್ಯಾತರಾಗಿದ್ದರೂ ಸಹ, ಸಂಘಟನೆಯ ಕೊರತೆ, ನಾಯಕರಲ್ಲಿನ ಭಿನ್ನಾಭಿಪ್ರಾಯ ಹಾಗೂ ಮಠಾಧೀಶರಿಂದ ಸೂಕ್ತ ಮಾರ್ಗದರ್ಶನ ಸಿಗದಿರುವುದು ಸಮಾಜ ರಾಜಕೀಯವಾಗಿ ಹಿಂದುಳಿಯಲು ಪ್ರಮುಖ ಕಾರಣವಾಗಿದೆ. ಸೊರಬ, ಸಾಗರ, ಶಿವಮೊಗ್ಗ, ಹೊಸನಗರ ಹಾಗೂ ತೀರ್ಥಹಳ್ಳಿ ತಾಲ್ಲೂಕುಗಳಲ್ಲಿ ನಮ್ಮ ಸಮಾಜದ ನಾಯಕತ್ವವನ್ನು ಹತ್ತಿಕ್ಕಿದ ಅಪಕೀರ್ತಿ ಎಲ್ಲಾ ರಾಜಕೀಯ ಪಕ್ಷಗಳಿಗೂ ಸಲ್ಲುತ್ತದೆ. ಕಳೆದ 80 ವರ್ಷಗಳಿಂದ ನಮ್ಮ ಸಮುದಾಯದ ಬೆಂಬಲ ಪಡೆದು ಶಾಸಕರು, ಸಚಿವರು ಹಾಗೂ ನಿಗಮ ಮಂಡಳಿ ಅಧ್ಯಕ್ಷರಾಗಿ ಅಧಿಕಾರ ಅನುಭವಿಸಿದವರು ನಮ್ಮನ್ನು ಕಡೆಗಣಿಸಿದ್ದಾರೆ. ಜಿಲ್ಲೆಯಲ್ಲಿ ಸಮಾಜದ ಅಸ್ತಿತ್ವ ಮತ್ತು ಹಿತವನ್ನು ಕಾಪಾಡಿಕೊಳ್ಳಲು ಸಂಘಟನೆ ಅನಿವಾರ್ಯವಾಗಿದ್ದು, ಆ ನಿಟ್ಟಿನಲ್ಲಿ ಈ ಸಮಾವೇಶವನ್ನು ರೂಪಿಸಲಾಗಿದೆ” ಎಂದರು.

ಕಾರ್ಯಕ್ರಮದ ವಿವರ:

ಡಿಸೆಂಬರ್ 18ರ ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದೆ. ರಂಭಾಪುರಿ ವೀರಸಿಂಹಾಸನಾಧೀಶ್ವರ ಶ್ರೀ 1008 ಜಗದ್ಗುರು ಪ್ರಸನ್ನ ರೇಣುಕ ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರ ದಿವ್ಯ ಸಾನ್ನಿಧ್ಯದಲ್ಲಿ ಸಮಾವೇಶ ನಡೆಯಲಿದೆ. ಶ್ರೀ ರಂಭಾಪುರಿ ಖಾಸಾ ಶಾಖಾಮಠದ ಶ್ರೀ ಡಾ. ಗುರುನಾಗಭೂಷಣ ಶಿವಾಚಾರ್ಯ ಸ್ವಾಮೀಜಿ ನೇತೃತ್ವ ವಹಿಸಲಿದ್ದಾರೆ.

ವೇದಿಕೆಯ ಅಧ್ಯಕ್ಷತೆಯನ್ನು ಕೆಳದಿ ವೀರಶೈವ ಮಲ್ಲವ ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ಬಿ. ಯುವರಾಜ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೆಳದಿ ರಾಜವಂಶಸ್ಥ ಎಂ.ಡಿ. ಮಲ್ಲೂರು, ಸಂಸದ ಬಿ.ವೈ. ರಾಘವೇಂದ್ರ, ಶಾಸಕ ಬೇಳೂರು ಗೋಪಾಲಕೃಷ್ಣ ಹಾಗೂ ಬೆಂಗಳೂರಿನ ವಕೀಲ ಜಯಕುಮಾರ್ ಸೇರಿದಂತೆ ಹಲವು ಪ್ರಮುಖರು ಭಾಗವಹಿಸಲಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಬ್ರಹ್ಮೇಶ್ವರದ ಚನ್ನಬಸಪ್ಪ ಗೌಡ, ವಸವೆ ಈಶ್ವರಪ್ಪ ಗೌಡ, ಜಿ.ಟಿ. ಈಶ್ವರಪ್ಪ ಗೌಡ, ಕಂಕಳಲೆ ಜಯಕುಮಾರ್ ಗೌಡ, ಎತ್ತಿಗೆ ಮಹೇಶ್ ಗೌಡ, ಎ.ವಿ. ಮಲ್ಲಿಕಾರ್ಜುನ್ ಉಪಸ್ಥಿತರಿದ್ದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]